ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ.ಪಾರ್ವತಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ದೂರಿನ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ತೀರ್ಪು ಕಾಯ್ದಿರಿಸಿ ಮುಂದಿನ ವಿಚಾರಣೆಯನನ್ನು ಆಗಸ್ಟ್ 13ಕ್ಕೆ ಮುಂದೂಡಿದರು.
ಮೈಸೂರಿನ ನಿವಾಸಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ.ದೇವರಾಜು ಮತ್ತಿತರನ್ನು ಆರೋಪಿಗಳನ್ನಾಗಿಸಲಾಗಿದೆ.