ಮುಡಾ ಬದಲಿ ಸೈಟು ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೋಟೀಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಆ.31ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಗುರುವಾರ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಆರಂಭಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಧೀರ್ಘವಾಗಿ ವಾದ ಮಂಡಿಸಿದರು.
ಸಿದ್ದರಾಮಯ್ಯ ಪರವಾಗಿ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಆದರೆ ಸೆಕ್ಷನ್ 17-ಎ ಅನ್ವಯವಾಗುವುದಿಲ್ಲ. ಇದರ ಆಧಾರದ ಮೇಲೆ ಅನುಮತಿ ನೀಡಿರುವುದು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಶನಿವಾರ ಬೆಳಗ್ಗೆ 10:30ಕ್ಕೆ ವಿಚಾರಣೆ ನಡೆಯಲಿದೆ. ಅಲ್ಲಿಯ ತನಕ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿ