ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ಚಳವಳಿಯ ಹಿರಿಯ ನಾಯಕ ಲಕ್ಷ್ಮೀನಾರಾಯಣ ನಾಗವಾರ ಅವರ ಅಂತಿಮ ದರ್ಶನ ಪಡೆದರು. ಕುಟುಂಬದವರ ಮತ್ತು ಬಂಧುಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಅವರ ದುಃಖದಲ್ಲಿ ಭಾಗಿಯಾದರು. ಲಕ್ಷ್ಮೀನಾರಾಯಣ್ ಅವರ ಅಂತ್ಯ ಸಂಸ್ಕಾರದ ವೇಳೆ ಪೊಲೀಸ್ ಗೌರವ ಸಲ್ಲಿಸಲು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ದಲಿತ ಸಮುದಾಯವನ್ನೇ ತನ್ನ ಕುಟುಂಬವನ್ನಾಗಿಸಿಕೊಂಡಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಸಂಘಟನೆ ಮತ್ತು ಹೋರಾಟದ ಮೂಲಕ ದನಿ ಇಲ್ಲದ ದಮನಿತ ಸಮುದಾಯಕ್ಕೆ ದನಿಯಾಗಿದ್ದರು. ರಾಜ್ಯದ ಯಾವುದೇ ಭಾಗದಲ್ಲಿ ದಲಿತರ ಮೇಲೆ ಅನ್ಯಾಯ ದೌರ್ಜನ್ಯ ನಡೆದರೂ ಅಲ್ಲಿಗೆ ಧಾವಿಸಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದರು. ಇಡೀ ರಾಜ್ಯವನ್ನು ಸುತ್ತಿ ದಲಿತ ಸಂಘರ್ಷ ಸಮಿತಿಯನ್ನು ಕಟ್ಟಿ ಬೆಳೆಸಿದ ನಾಯಕರಲ್ಲಿ ಒಬ್ಬರು ನಾಗವಾರ ಅವರು.