ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಬೆನ್ನಲ್ಲೇ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದತಿಗೆ ಸಿದ್ದತೆ!

Most read

ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಚಾಲನೆ ನೀಡಿದೆ ಎನ್ನಲಾಗಿದೆ. ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು ಇದಾದ ಬೆನ್ನಲ್ಲೇ ಈ ಕಾರ್ಯ ಶುರುವಾಗಿದೆ ಎನ್ನಲಾಗಿದೆ. SIT ಹಾಗೂ ರಾಜ್ಯ ಸರ್ಕಾರ ಕೂಡ ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಪತ್ರ ಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹೊಳೆನರಸೀಪುರ ಶಾಸಕರಾದ ರೇವಣ್ಣ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದ ಕೇಂದ್ರಬಿಂದುವಾಗಿದ್ದು, ತಮ್ಮ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಮತದಾನ ನಡೆದ ಒಂದು ದಿನದ ನಂತರ ದೇಶ ತೊರೆದಿದ್ದಾರೆ ಅವರು ಇದುವರೆಗೂ ಎಲ್ಲಿದ್ದಾರೆ ಎಂಬ ಸುಳಿವು ಯಾರಿಗೂ ಲಭಿಸಿಲ್ಲ.

ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದಂತೆ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಪಡಿಸಲು ಕರ್ನಾಟಕ ಸರ್ಕಾರದಿಂದ ಎಂಇಎ ಪತ್ರವನ್ನು ಸ್ವೀಕರಿಸಿದೆ, ಇದನ್ನು ಪ್ರಕ್ರಿಯೆಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್‌‍ ಮುಖಂಡ ಪ್ರಜ್ವಲ್‌ ವಿರುದ್ಧ ಬಂಧನ ವಾರಂಟ್‌ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಪಡಿಸುವ ಮನವಿಗೆ ಕೇಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದರು. ಎಸ್‌‍ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್‌ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದೆ.

ಈ ತಿಂಗಳ ಆರಂಭದಲ್ಲಿ, ವಿದೇಶಾಂಗ ಇಲಾಖೆ ವಕ್ತಾರ ರಣಧೀರ್‌ ಜೈಸ್ವಾಲ್‌‍ ಅವರು, ರೇವಣ್ಣ ಅವರು ರಾಜತಾಂತ್ರಿಕ ಪಾಸ್‌‍ಪೋರ್ಟ್‌ನಲ್ಲಿ ಜರ್ಮನಿಗೆ ಪ್ರಯಾಣಿಸಿದ್ದಾರೆ ಮತ್ತು ಪ್ರವಾಸಕ್ಕೆ ರಾಜಕೀಯ ಅನುಮತಿಯನ್ನು ಪಡೆದಿಲ್ಲ ಎಂದು ಹೇಳಿದ್ದರು.

More articles

Latest article