ಮುಡಾ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ ಇದೀಗ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಸಿಎಂ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸುತ್ತಿದ್ದಾರೆ.
“ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದ್ದು, ಇದು ಶಾಸನಬದ್ಧ ಆದೇಶಗಳನ್ನು ಉಲ್ಲಂಘಿಸಲಾಗಿದೆ. ಸಚಿವ ಸಂಪುಟದ ಸಲಹೆಯನ್ನು ರಾಜ್ಯಪಾಲರು ನಿರಾಕರಿಸಿದ್ದಾರೆ. ಯಾವ ಕಾರಣಕ್ಕೆ ಅನುಮತಿ ನೀಡಲಾಗಿದೆ ಎಂಬ ಅಂಶವನ್ನೇ ಅವರು ಇನ್ನು ವಿವರಿಸಿಲ್ಲ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಕೂಡಿದೆ. ಹಾಗಾಗಿ, ಈ ಅನುಮತಿ ರಾಜಕೀಯ ದುರುದ್ಧೇಶಗಳಿಂದ ಕೂಡಿದೆ ಎಂದು ಪರಿಗಣಿಸಬೇಕು” ಎಂದು ಅವರು ವಾದ ಮಂಡಿಸಿದ್ದಾರೆ.