ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ  ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು  ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ  ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು ಎಂದರು.

ವಿಶ್ರಾಂತಿ ಪಡೆದ ಬಳಿಕ ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

More articles

Latest article

Most read