ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಲು ಸಿ.ಎಂ.ಸಿದ್ದರಾಮಯ್ಯ ಸಲಹೆ

Most read

ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಈ ದಿಕ್ಕಿನಲ್ಲಿ ಎಲ್ಲಾ ಅಕಾಡೆಮಿಗಳು ಕಾರ್ಯ ನಿರ್ವಹಿಸಬೇಕು ಎಂದ ಮುಖ್ಯಮಂತ್ರಿಗಳು ಏನೇ ಹೊಸ ಪ್ರಯತ್ನ ಮಾಡಿದರೂ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ಅಕಾಡೆಮಿಗೆ ಅಗತ್ಯವಾದ ಹಣಕಾಸಿನ ನೆರವನ್ನು ಒದಗಿಸಲು ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು

More articles

Latest article