ಕಟ್ಟಡ ಕುಸಿತದ ಸ್ಥಳಕ್ಕೆ ಸಿಎಂ ಭೇಟಿ : ಮೃತಪಟ್ಟವರಿಗೆ ₹5 ಲಕ್ಷ ಪರಿಹಾರ  

ಬೆಂಗಳೂರು : ನಗರದ ಬಾಬು ಸಾ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಬೇಟಿ ಕೊಟ್ಟ ಅವರು, ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಕೊಟ್ಟ ಐಎಎಸ್‌ ಅಧಿಕಾರಿ ವಲಯ ಆಯುಕ್ತ, ಕಾರ್ಯಪಾಲಕ ಎಂಜಿನಿಯರ್‌ ಅವರಿಗೆ ನೋಟಿಸ್‌ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೆ ಸೂಚಿಸಿದರು. ಈಗಾಗಲೇ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಅಮಾನತು ಮಾಡಲಾಗಿದೆ ಎಂದು ಹೇಳಿದರು.

ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.

ಬಿಬಿಎಂಪಿಯಿಂದ ತಲಾ ₹2 ಲಕ್ಷ ಹಾಗೂ ಕಾರ್ಮಿಕ ಇಲಾಖೆಯಿಂದ ತಲಾ ₹3 ಲಕ್ಷ ಪರಿಹಾರವನ್ನು ಮೃತರ ಕುಟುಂಬಕ್ಕೆ ನೀಡಬೇಕು ಎಂದು ಘೋಷಿಸಿದರು. ಕಟ್ಟಡ ಕುಸಿತದಲ್ಲಿ ಗಾಯಗೊಂಡವರ ಸಂರ್ಪೂಣ ಚಿಕಿತ್ಸಾ ವೆಚ್ಚವನ್ನು ಇಲಾಖೆಗಳಿದಂಲೇ ಭರಿಸಬೇಕು ಎಂದು ಆಗ್ರಹಿಸಿದರು.

ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಸಚಿವ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಶಾಸಕ ಬೈರತಿ ಬಸವರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More articles

Latest article

Most read