ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹಿಂಪಡೆಯಲು ಒತ್ತಾಯಿಸಿ ಚಾಮುಂಡಿ ಬೆಟ್ಟದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಚಾಮುಂಡಿಬೆಟ್ಟದ ನಿವಾಸಿಗಳು, ವ್ಯಾಪಾರಸ್ಥರು ಬೆಳಗ್ಗೆಯಿಂದ ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಂಗಡಿ ಮುಂಗಟ್ಟು ಬಂದ್ ಕಾರಣ ಭಕ್ತರಿಗೂ ಬಂದ್ ಬಿಸಿ ತಟ್ಟಿದೆ. ಸಂಜೆವರೆಗೂ ಸಂಪೂರ್ಣ ಅಂಗಡಿ ಮುಂಗಟ್ಟು ಬಂದ್ ಮಾಡಿ ಚಾಮುಂಡಿಬೆಟ್ಟದಲ್ಲಿ ಪ್ರತಿಭಟನೆ ರ್ಯಾಲಿ ನಡೆಸಲಿದ್ದಾರೆ.