ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದೆ. ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಗಳಿವೆ. ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸಲ್ಸಿಯಸ್ ತಾಪಮಾನ ಇರುವ ಸಂಭವವಿದ್ದು, ಎರಡು ಮೂರು ದಿನ ಇದೇ ವಾತಾವರಣ ಮೂಮದುವರೆಯಲಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ನಿನ್ನೆಯ ಹವಾಮಾನವೇ ಮುಂದುವರೆದಿದೆ. ಸಹಜವಾಗಿ ಬೆಳಗ್ಗೆ ಹಾಗೂ ಸಂಜೆ ಮೋಡ ಕವಿದ ವಾತಾವರಣ ಇರುತ್ತದೆ. ಆದರೆ ಡಿಸೆಂಬರ್ 23 ರಿಂದ 26ರ ವರೆಗೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಹೆಚ್ಚಾಗಲಿದೆ. ಡಿ. 24ರ ಮಂಗಳವಾರ ಉಡುಪಿ, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಚಾಮರಾಜನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
.