ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಿರುವ ಹವಾಮಾನ ಇಲಾಖೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಬೀಸುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ,
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೆವ ಶೀತಗಾಳಿ ಬೀಸಲಿದೆ. ಇದರಿಂದ ಮುಂಜಾನೆ ಮತ್ತು ಸಂಜೆ ಚಳಿಯ ವಾತಾವರಣ ನಿರ್ಮಾಣವಾಗಲಿದೆ. ಉಳಿದ ಜಿಲ್ಲೆಗಳಲ್ಲೂ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವವು ಪ್ರದೇಶಗಳಲ್ಲಿ ತಾಪಮಾನ ಶೇ. 5 ಡಿಗ್ರಿಗಿಂತ ಕೆಳಗೆ ಕುಸಿಯಲಿದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಬೆಳಗ್ಗೆ ಮತ್ತು ಸಂಜೆಯ ವೇಳೆ ಮಂಜು ಮುಸುಕಿನ ವಾತಾವರಣ ಮುಂದುವರೆಯಲಿದೆ. ಆದರೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದೆ. ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 24 ಗಂಟೆಗಳ ಕಾಲ ರಾಜಧಾನಿ ಬೆಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಬೆಳಗಿನ ಸಮಯದಲ್ಲಿ ದಟ್ಟ ಮಂಜು ಕಾಣಿಸಿಕೊಳ್ಳಲಿದೆ. ಇನ್ನೂ ಕೆಲವೆಡೆ ಮಧ್ಯಮ ಮಂಜು ಇರಲಿದೆ. ಗರಿಷ್ಠ ತಾಪಮಾನವು 27 ಡಿಗ್ರಿ ಆದರೆ, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಮೋಡಗಳಿಲ್ಲದ ಆಕಾಶ ಕಾಣಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.