ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಆಗ್ರಹಾರ ಜೈಲಿನಲ್ಲಿರುವ ಎ1 ಆರೋಪಿ ಪವಿತ್ರಾಗೌಡ, ಜೈಲಿನಲ್ಲಿದ್ದು ಹೊರ ಬಂದಿರುವ ಸಂಧ್ಯಾ ನಾಗರಾಜ್ ಎಂಬುವರ ವಿರುದ್ಧ ದೂರು ನೀಡಿದ್ದಾರೆ.
3 ತಿಂಗಳುಗಳ ಕಾಲ ಜೈಲಿನಲ್ಲಿದ್ದು ಜಾಮೀನು ಪಡೆದುಕೊಂಡು ಹೊರ ಬಂದಿರುವ ಸಂಧ್ಯಾ ನಾಗರಾಜ್ ಎಂಬುವರು ಮಾಧ್ಯಮವೊಂದರ ಸಂದರ್ಶನದಲ್ಲಿ ಪವಿತ್ರಾಗೌಡಗೆ ಜೈಲಿನಲ್ಲಿ ಪೊಲೀಸ್ ಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ. ಅಧಿಕಾರಿಗಳ ಮನೆಯೂಟ ಸೇವಿಸುತ್ತಿದ್ದಾರೆ. ಸಹಾಯಕಿಯರನ್ನು ಇಟ್ಟುಕೊಂಡಿದ್ದಾರೆ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದರು.
ಆದರೆ, ಈ ಆರೋಪವನ್ನು ನಿರಾಕರಿಸಿರುವ ಪವಿತ್ರಾಗೌಡ ಜೈಲಿನಲ್ಲಿ ಇದ್ದುಕೊಂಡೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೊತೆಗೆ ರಶ್ಮಿ ಎಂಬ ಆರೋಪಿಯೂ ದೂರು ನೀಡಿದ್ದಾರೆ.

