ಬಿಜೆಪಿ ರ್ಯಾಲಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ರಾಜ್ಯಸಭಾ ಸದಸ್ಯ ಸಾಕೇತ್ ಘೋಕಲೆ ಆಂಧ್ರದ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಕಳೆದ ಭಾನುವಾರ ಸಂಜೆ ಹೊತ್ತಿನಲ್ಲಿ ಆಂದ್ರಪ್ರದೇಶದ ಪಲ್ನಾಡು ಜಿಲ್ಲೆಯ ಚಿಲಕಾಲುರಿಪೇಟ್ ಲ್ಲಿ ಆಯೋಜಿಸಿದ್ದ ರ್ಯಾಲಿಗೆ ತೆರಳಲು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಸಂಖ್ಯೆ ZP 5236 ನ್ನು ಬಳಸಿದ್ದರು. ಇದು ಮಾರ್ಗಸೂಚಿಗಳ ಪ್ರಕಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಚುನಾವಣಾ ಪ್ರಚಾರಕ್ಕಾಗಿ ಭಾರತೀಯ ವಾಯುಪಡೆಗೆ ಸಂಬಂಧಪಟ್ಟ ಹೆಲಿಕಾಪ್ಟರ್ ಬಳಸುವುದು ಚುನಾವಣಾ ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆ. ಈ ಪ್ರಕರಣವನ್ನು ತುರ್ತು ಎಂದು ಪರಿಗಣಿಸಿ ಕಾನೂನು ಕ್ರಮ ವಹಿಸಬೇಕು ಎಂದು ಸಂಸದ ಸಾಕೇತ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.