ಆರ್ಯವರ್ಧನ್‌ ಗುರೂಜಿ ವಿರುದ್ಧ ದೂರು ದಾಖಲು

ಬೆಂಗಳೂರು :  ಆರ್ಯವರ್ಧನ್ ಗುರೂಜಿ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಲಕ್ಷ್ಮೀ ದೇವಿ ಕುರಿತು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,  ಆರ್ಯವರ್ಧನ್‌ ವಿರುದ್ಧ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಹೇಳಿಕೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಮಹಿಳೆಯರ ಗೌರವಕ್ಕೂ ಅವಮಾನವಾಗಿದೆ ಎಂದು ಆರೋಪಿಸಿರುವ ಕರ್ನಾಟಕ ಗೋವು ರಕ್ಷಕರ ಸೇನೆ, ಆರ್ಯವರ್ಧನ್ ಗುರೂಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದರ್ಶನದ ವಿಡಿಯೊದಲ್ಲಿ, ಲಕ್ಷ್ಮೀ ದೇವಿ ಕುರಿತು ವಿವಾದಾತ್ಮಕ ಅರ್ಥ ಬರುವ ರೀತಿಯಲ್ಲಿ ಆರ್ಯವರ್ಧನ್ ಗುರೂಜಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಾನವ ದೇಹದ ಒಂದು ಅಂಗವನ್ನು  ಪೂಜಿಸಿದರೆ ಲಕ್ಷ್ಮಿ ಒಲಿಯುತ್ತಾಳೆ ಎಂಬ ಬಗ್ಗೆ ಮಾತನಾಡಿರುವುದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಲಾಗಿದೆ.

ಕರ್ನಾಟಕ ಗೋವು ರಕ್ಷಕರ ಸೇನೆ ಪರ ಸುಮನ್‌ ಎಂಬುವರು ಶಂಕರಪುರಂ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದು, ಆರ್ಯವರ್ಧನ್ ಗುರೂಜಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

More articles

Latest article

Most read