ಬೆಂಗಳೂರಿನಲ್ಲಿ ಮಾರ್ಚ್ ಅಂತ್ಯದೊಳಗೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ 

ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಆದೇಶ

ಬೆಂಗಳೂರು :  ಪೂರ್ವ ನಗರ ಪಾಲಿಕೆಯಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಮತ್ತು ವಾರ್ಡ ಅನುದಾನ ಅಡಿಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ, ಪಾದಚಾರಿ ಮಾರ್ಗ ಅಭಿವೃದ್ಧಿ ಹಾಗೂ ಚರಂಡಿ ಡೀಸಿಲ್ಟಿಂಗ್ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಗರದ ಮೂಲಸೌಕರ್ಯವನ್ನು ಬಲಪಡಿಸುವುದು, ಸಂಚಾರ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ಮಳೆಗಾಲದ ಸಂದರ್ಭದಲ್ಲಿ ಮಳೆನೀರು ಸರಾಗವಾಗಿ ಹರಿಯುವಂತೆ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಈ ಕಾಮಗಾರಿಗಳ ಮುಖ್ಯ ಉದ್ದೇಶವಾಗಿದ್ದು, ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು.

ಕಲ್ಕೆರೆ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿ ಪರಿಶೀಲನೆ : ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ರಾಜಕುಮಾರ್ ಸರ್ಕಲ್‌ನಿಂದ ಟಿ.ಸಿ.ಪಾಳ್ಯ ರಸ್ತೆ ಜಂಕ್ಷನ್ ವರೆಗೆ ಇರುವ ಕಲ್ಕೆರೆ ರಸ್ತೆಯಲ್ಲಿ ನಡೆಯುತ್ತಿರುವ ಆರ್ಟೀರಿಯಲ್ ಮತ್ತು ಸಬ್–ಆರ್ಟೀರಿಯಲ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಆಯುಕ್ತರು ಪರಿಶೀಲಿಸಿದರು.

ಈ ಕಾಮಗಾರಿಯಡಿಯಲ್ಲಿ ಚರಂಡಿ ಅಭಿವೃದ್ಧಿ, ಪಾದಚಾರಿ ಮಾರ್ಗ ನಿರ್ಮಾಣ ಹಾಗೂ ಡಾಂಬರೀಕರಣ ಸೇರಿದಂತೆ ಸಮಗ್ರ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಗ್ಗದಾಸಪುರ ರೈಲ್ವೆ ಗೇಟ್- ಪ್ರಮುಖ ರಸ್ತೆ ಕಾಮಗಾರಿ

ಮಹದೇವಪುರ ವ್ಯಾಪ್ತಿಯಲ್ಲಿ  ಇಂದಿರಾ ಕ್ಯಾಂಟೀನ್‌ನಿಂದ ಕಗ್ಗದಾಸಪುರ ರೈಲ್ವೆ ಗೇಟ್ ರಸ್ತೆವರೆಗೆ  ಪ್ರಮುಖ ರಸ್ತೆಗಳ ಅಭಿವೃದ್ಧಿ ಅನುದಾನದಡಿ ಕೈಗೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿಯನ್ನು ವೇಗಗೊಳಿಸಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪೈ ಲೇಔಟ್ – ವಾರ್ಡ್ ರಸ್ತೆ ಅಭಿವೃದ್ಧಿ ಕಾಮಗಾರಿ

ಪೈ ಲೇಔಟ್ ಪ್ರದೇಶದಲ್ಲಿ ವಾರ್ಡ್ ರಸ್ತೆ ಅಭಿವೃದ್ಧಿ ಅನುದಾನದಡಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿ, ಸ್ಥಳೀಯ ನಿವಾಸಿಗಳಿಗೆ ಉತ್ತಮ ಸಂಚಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಕೆ.ನಾರಾಯಣಪುರ ಕ್ರಾಸ್‌ನಿಂದ ಹನುಮೇಗೌಡ ಸರ್ಕಲ್ ವರೆಗೆ

ಕೆ.ನಾರಾಯಣಪುರ ಕ್ರಾಸ್‌ನಿಂದ ಹನುಮೇಗೌಡ ಸರ್ಕಲ್ ವರೆಗೆ ಚರಂಡಿ ಡೀಸಿಲ್ಟಿಂಗ್ ಕಾಮಗಾರಿ ನಡೆಯುತ್ತಿದ್ದು, ಇದನ್ನು ಪರಿಶೀಲಿಸಿ ಮಳೆನೀರು ಸರಾಗವಾಗಿ ಹರಿಯಲು ಚರಂಡಿಗಳಲ್ಲಿನ ಮಣ್ಣು ಮತ್ತು ಕಸವನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಾಗಪ್ಪ ರೆಡ್ಡಿ ಲೇಔಟ್ (ಎಚ್‌ಎಎಲ್ ವಿಭಾಗ) 

ಎಚ್‌ಎಎಲ್ ವಿಭಾಗದ ನಾಗಪ್ಪ ರೆಡ್ಡಿ ಲೇಔಟ್ ಪ್ರದೇಶದಲ್ಲಿ ವಾರ್ಡ್ ಅಭಿವೃದ್ಧಿ ಕಾಮಗಾರಿಗಳ  ಚರಂಡಿ ಡೀಸಿಲ್ಟಿಂಗ್ ಕಾರ್ಯವನ್ನು ಪರಿಶೀಲಿಸಿ, ಮಳೆಗಾಲದ ಮುನ್ನೆಚ್ಚರಿಕಾ ಕ್ರಮವಾಗಿ ಈ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ಕಲ್ಕೆರೆ ಬಡಾವಣೆಗಳಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಪರಿಶೀಲನೆ

ಕಲ್ಕೆರೆ  ವ್ಯಾಪ್ತಿಯ ಕೆ. ಚನ್ನಸಂದ್ರ ಚರ್ಚ್ ರಸ್ತೆ, ವಿನಾಯಕ ಲೇಔಟ್, ಗುರು ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೂಡ ಆಯುಕ್ತರು ಪರಿಶೀಲಿಸಿದರು.

ನಗರದಲ್ಲಿ ರಸ್ತೆ ಮೂಲಸೌಕರ್ಯವನ್ನು ಬಲಪಡಿಸುವುದು, ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ಸಾರ್ವಜನಿಕರಿಗೆ ಉತ್ತಮ ಸಂಚಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ ಬದ್ಧವಾಗಿದೆ ಎಂದು ಆಯುಕ್ತರು ಈ ಸಂದರ್ಭದಲ್ಲಿ ತಿಳಿಸಿದರು.

More articles

Latest article

Most read