Friday, December 6, 2024

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಅಗ್ನಿಪಥ್’ ರದ್ದು, ಹಳೆಯ ನೇಮಕಾತಿ ಯೋಜನೆ ಪುನಃಸ್ಥಾಪನೆ

Most read

ಲೋಕಸಭೆ ಚುನಾವಣೆಯಲ್ಲಿ ಬೆನ್ನಲ್ಲೇ ಕಾಂಗ್ರೆಸ್ ಸಾಲು ಸಾಲು ಭರವಸೆಗಳನ್ನು ನೀಡುತ್ತಿದ್ದಾರೆ‌.
‘ಅಗ್ನಿಪಥ್’ ಮಿಲಿಟರಿ ನೇಮಕಾತಿ ಯುವಕರಿಗೆ “ಘೋರ ಅನ್ಯಾಯ” ಮಾಡಿದೆ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವು ಗುರಿಯಾಗಿಸಿಕೊಂಡು ದೂರಿದೆ. ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ‘ಅಗ್ನಿಪಥ್’ ಯೋಜನೆಯನ್ನು ರದ್ದುಗೊಳಿಸುವುದಾಗಿ ಮತ್ತು ಸಶಸ್ತ್ರ ಸೇವೆಗಳ ನೇಮಕಾತಿಯ ಹಳೆಯ ವ್ಯವಸ್ಥೆಯನ್ನ ಪುನಃಸ್ಥಾಪಿಸುವುದಾಗಿ ಭರವಸೆ ನೀಡಿದೆ.

‘ಅಗ್ನಿಪಥ್’ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನ ಬಯಸುವ ಯುವಕರಿಗೆ “ತೀವ್ರ ಅನ್ಯಾಯ” ಮಾಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆಯನ್ನ ರದ್ದುಗೊಳಿಸಿದ್ದರಿಂದ ಸುಮಾರು ಎರಡು ಲಕ್ಷ ಯುವಕರು ಮತ್ತು ಮಹಿಳೆಯರ ಭವಿಷ್ಯ ಅನಿಶ್ಚಿತವಾಗಿದೆ ಎಂದು ಖರ್ಗೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

More articles

Latest article