ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ದಿಢೀರನೆ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಯೋಸಹಜ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ 79 ವರ್ಷದ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸಧ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿದ್ದು ಅವರಿಗೆ ಕೆಮ್ಮಿನ ಸಮಸ್ಯೆ ಇದೆ. ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ಬರುತ್ತಲೇ ಇರುತ್ತಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

