ಬೆಂಗಳೂರು: ಚುನಾವಣಾ ಪ್ರಚಾರಕ್ಕೆಂದು ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಚೊಂಬಿನೊಂದಿಗೆ ವಿಶಿಷ್ಟವಾಗಿ ಬರಮಾಡಿಕೊಳ್ಳಲು ಕಾಂಗ್ರೆಸ್ ನಾಯಕರು ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಮೇಖ್ರಿ ಸರ್ಕಲ್ ನಲ್ಲಿ ಕಾಂಗ್ರೆಸ್ ನಾಯಕರು ಚೊಂಬು ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಪ್ರತಿಭಟನೆಗೆ ಬಂದ ಕಾಂಗ್ರೆಸ್ ಮಾಧ್ಯಮ ಸಹ ಅಧ್ಯಕ್ಷೆ ಐಶ್ವರ್ಯ ಮಹಾದೇವ್ ಸೇರಿದಂತೆ, ಯೂತ್ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರನ್ನು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಉಳಿದ ಪ್ರತಿಭನಾಕಾರರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಚೊಂಬು ಎಂದು ಪ್ರಚಾರ ಮಾಡಿದ್ದ ಕಾಂಗ್ರೆಸ್, ಇದೀಗ ಮೋದಿ ಆಗಮನದ ಹಿನ್ನೆಲೆಯಲ್ಲಿ ಚೊಂಬಿನ ಪ್ರತಿಭಟನೆ ಮಾಡಲಿದೆ. ಇದರ ಜೊತೆಗೆ ಅಭಿಯಾನ ಕೂಡ ಶುರುವಾಗಲಿದೆ. ಉತ್ತರ ಕೊಡಿ ಮೋದಿ, ಬಿಜೆಪಿ ಬೊಂಬು ಸರ್ಕಾರ ಎಂದು ಅಭಿಯಾನ ಆರಂಭಿಸಿದ್ದಾರೆ. ಎಕ್ಸ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಕಿಡಿಕಾರಿದ್ದು, ಮೋದಿಯವರು ಅಚ್ಛೇದಿನ್ ಹೊರೆಯಾಗಿದೆ. ದೇಶದ ಪ್ರಗತಿಗಾಗಿ ನೀಡಿರುವ ಕೊಡುಗೆ ಏನು. ಬಿಜೆಪಿ ಸೋಲಿಸಿ ಎಂದು ಸುರ್ಜೇವಾಲ ಕಿಡಿಕಾರಿದ್ದಾರೆ.