ಸಿಎಂ ಮೇಲಿನ ಆರೋಪ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಬಸ್‌ಗೆ ಕಲ್ಲು, ಟಯರ್‌ಗೆ ಬೆಂಕಿ

Most read

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಅತಿರೇಕಗೊಂಡು ಬಸ್‌ಗೆ ಕಲ್ಲು ಹೊಡೆದು ಟೈಯರ್‌ಗೆ ಬೆಂಕಿ ಹಚ್ಚಿರುವುದು ವರದಿಯಾಗಿದೆ.

ಲಾಲ್ ಬಾಗ್ ಜಂಕ್ಷನ್ ಬಳಿ ಪ್ರತಿಭಟನೆ ನಡೆಯುತ್ತಿರುವ ವೇಳೆ ಕೆಲವು ಕಿಡಿಗೇಡಿಗಳು ಖಾಸಗಿ ಬಸ್ ಗೆ ಕಲ್ಲು ಹೊಡೆದಿದ್ದಾರೆ, ಪರಿಣಾಮ ಬಸ್‌ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.

ನಂತರ ಜಂಕ್ಷನ್ ಬಳಿ ಟೈಯರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ಕೂಡಲೇ ಸಿಎಂ ವಿರುದ್ಧ ನೀಡಿದ್ದ ಪ್ರಾಸಿಕ್ಯೂಷನ್‌ ಅನುಮತಿಯನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದಾರೆ.

More articles

Latest article