ಪರಿಷತ್ ಚುನಾವಣೆ : ರೆಸಾರ್ಟ್‌ನಲ್ಲಿ ಕಾಂಗ್ರೆಸ್ ತಂತ್ರ, ಶಾಸಕರಿಗೆ ಮತದಾನದ ತರಬೇತಿ 

ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುಣಾವಣೆ ನಾಳೆ ನಡೆಯಲಿದ್ದು, ಬಿಡದಿ ತಾಲ್ಲೂಕಿನ ವಂಡರ್‌ಲಾ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಮತದಾನದ ಬಗ್ಗೆ ಕಾಂಗ್ರೆಸ್‌ ಶಾಸಕರಿಗೆ ತರಬೇತಿ ನೀಡಲಾಗುತ್ತಿದೆ. ಅಡ್ಡ ಮತದಾನ ತಡೆಯಲು ಅಣಕು ಮತದಾನ ಮಾಡಿಸಲಾಗಿದೆ ಎನ್ನಲಾಗಿದೆ.

ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ನಿನ್ನೆ ಸಂಜೆಯೇ ರೆಸಾರ್ಟ್‌ಗೆ ಕರೆತರಲಾಗಿದ್ದು, ಎಲ್ಲರಿಗೂ ಮಂಗಳವಾರ ರಾತ್ರಿಯಿಂದ ಗುರುವಾರ ಬೆಳಗ್ಗೆವರೆಗೂ ರೆಸಾರ್ಟ್‌ನಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಗುರುವಾರ ಬೆಳಗ್ಗೆ ಎಲ್ಲಾ ಶಾಸಕರನ್ನು ಒಟ್ಟಿಗೆ ವಿಧಾನಸೌಧಕ್ಕೆ ಕರೆತಂದು ಮತದಾನ ಮಾಡಿಸಲಾಗುತ್ತಿದೆ.

ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಗುರುವಾರ ಮತದಾನ ನಡೆಯಲಿದ್ದು, ಕಾಂಗ್ರೆಸ್‌ನಿಂದು ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ನಾಲ್ವರು ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುವ ಅವಕಾಶ ಇದ್ದರೂ ಸಹ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿದೆ. ಹೀಗಾಗಿ ಕಾಂಗ್ರೆಸ್ ಶಾಸಕರು ಕುದುರೆ ವ್ಯಾಪಾರಕ್ಕೆ ಒಳಗಾಗದಿರಲು ಮತ್ತು ಅಡ್ಡಮತದಾನ ಆಗದಂತೆ ಅವರಿಗೆ ಮತದಾನದ ಬಗ್ಗೆ ಸೂಕ್ತ ತರಬೇತಿ ನೀಡಲು ರೆಸಾರ್ಟ್‌ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಕಾಂಗ್ರೆಸ್‌ನ ಐವರ ಜೊತೆಗೆ ಬಿಜೆಪಿಯ ಇಬ್ಬರು ಮತ್ತು ಜೆಡಿಎಸ್‌ನ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಕಾಂಗ್ರೆಸ್‌ನ ಅತೃಪ್ತರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಜೆಡಿಎಸ್‌ ನಾಯಕರು ಹೇಳಿರುವುದರಿಂದ ಯಾವುದೇ ರೀತಿಯ ಕುದುರೆ ವ್ಯಾಪಾರ ಅಗದಂತೆ ತಡೆಯಲು ಶಾಸಕರ ರಕ್ಷಣೆಗೆ ರೆಸಾರ್ಟ್‌ ಕಾರ್ಯತಂತ್ರ ರೂಪಿಸಲಾಗಿದೆ.

ಸಂಖ್ಯಾಬಲ ಹೀಗಿದೆ :
ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲ 222 ಇದ್ದು, ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿರುವುದರಿಂದ ಪ್ರತಿ ಅಭ್ಯರ್ಥಿ ಗೆಲ್ಲಲು 28 ಶಾಸಕರ ಮತಗಳು ಅಗತ್ಯ. ಪ್ರಸ್ತುತ ಕಾಂಗ್ರೆಸ್‌ ಬಳಿ ವಿಧಾನಸಭೆ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮತ ಸೇರಿದಂತೆ 135 ಮತಗಳು ಇವೆ. ಜತೆಗೆ ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ, ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ್‌, ಕೆ.ಎಚ್. ಪುಟ್ಟಸ್ವಾಮಿಗೌಡ ಅವರ ಬೆಂಬಲ ಸೇರಿ 138 ಮತಗಳು ಇವೆ. ಕಾಂಗ್ರೆಸ್‌ನ ಐವರು ಅಭ್ಯರ್ಥಿಗಳು ಗೆಲ್ಲಲು 140 ಮತಗಳ ಅಗತ್ಯ ಬೀಳುತ್ತದೆ. ಹೀಗಾಗಿ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಎಸ್‌.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ಮತಗಳನ್ನು ಸಹ ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಆದರೆ, ಗೌಪ್ಯ ಮತದಾನ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಮೊದಲ ನಾಲ್ಕು ಅಭ್ಯರ್ಥಿಗಳಿಗೆ ಪ್ರತಿ ಅಭ್ಯರ್ಥಿಗೆ 28 ಮತಗಳ ಜತೆಗೆ ಹೆಚ್ಚುವರಿಯಾಗಿ ಒಂದು ಮತ ಹಾಕಿಸಲಿದ್ದಾರೆ. ಉಳಿದ ಮತಗಳ ಜತೆಗೆ ಎರಡನೇ ಪ್ರಾಶಸ್ತ್ಯ ಮತಗಳು 5ನೇ ಅಭ್ಯರ್ಥಿಗೆ ಚಲಾವಣೆ ಮಾಡಿ ಐದೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ‘ಕೈ’ ತಂತ್ರವಾಗಿದೆ ಎಂದು ಹೇಳಲಾಗುತ್ತಿದೆ.

More articles

Latest article

Most read