ಸಿಎಂ ಬದಲಾವಣೆಗೆ ಕಾಂಗ್ರೆಸ್ ಒಕ್ಕಲಿಗ ಶಾಸಕರು ಸಭೆ ಸೇರಿಲ್ಲ: ಸಿಎಂ ಸ್ಪಷ್ಟನೆ

Most read

ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ಭಾವಿಸಿದ್ದಾರೆ ಎಂದರು. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಭೋಜನಕೂಟದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ಮತ್ತು ಅವರ ಆಪ್ತ ಸಚಿವರು ಮತ್ತು ಶಾಸಕರು ಸಭೆ ಸೇರಿದ್ದರು. ಈ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆದಿದೆ ಎಂಬ ವದಂತಿಗಳು ಹರಿದಾಡಿದ್ದವು. ಹೊಸ ವರ್ಷದ ಆಚರಣೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿರುವುದರಿಂದ ಅವರು ಭಾಗಿಯಾಗಿರಲಿಲ್ಲ. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಒಕ್ಕಲಿಗ ಶಾಸಕರಿಗೆ ಔತಣಕೂಟ ಹಮ್ಮಿಕೊಂಡಿದ್ದರು. ಈ ಸಭೆ ಕೇವಲ ಊಟಕ್ಕೆ ಮಾತ್ರ ಸೀಮಿತ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.

More articles

Latest article