INDIA ಮೈತ್ರಿಕೂಟದೊಳಗಿನ ರಾಜಕೀಯ ಭಿನ್ನಾಭಿಪ್ರಾಯದ ನಡುವೆಯೂ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ನ್ಯಾಯ್ ಯಾತ್ರೆ ಗುರುವಾರ ಅಸ್ಸಾಂನಿಂದ ಪಶ್ಚಿಮ ಬಂಗಾಳ ರಾಜ್ಯವನ್ನು ಪ್ರವೇಶಿಸಲಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಘೋಷಿಸಿದ ಒಂದು ದಿನದ ನಂತರ ಯಾತ್ರೆಯೂ ಪಶ್ಚಿಮ ಬಂಗಾಳ ರಾಜ್ಯವನ್ನು ಪ್ರವೇಶಿಸಲಿದೆ.
ಮಮತ ಬ್ಯಾನರ್ಜಿ ಅವರ ಈ ಹೇಳಿಕೆಯಿಂದಾಗಿ ಅನೇಕ ಕಾಂಗ್ರೆಸ್ ನಾಯಕರು ಬೇಸರ ವ್ಯಕ್ತಪಡಿಸಿದ್ದರೆ. ಮಮತ ಅವರು ಇಲ್ಲದ ಮೈತ್ರಿಕೂಟ ಯೋಚಿಸಲು ಸಾಧ್ಯವಿಲ್ಲ ಎಂಬ ಮಾತನ್ನು ಸಹ ಹಾಡಿದ್ದರು. ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿದ್ದ ರಾಹುಲ್ ಗಾಂಧಿ ಕೂಡ ಅವರು ಮೈತ್ರಿಕೂಟದಲ್ಲಿ ಇರಬೇಕು ಅವರು ದೇಶ ಕಂಡ ದೊಡ್ಡ ಮಹಿಳಾ ನಾಯಕಿ ಎಂದು ಹೇಳಿದ್ದರು.
ಕಾಂಗ್ರೆಸ್ ಮತ್ತು ಟಿಎಂಸಿ ಹಾಗೂ ಇನ್ನಿತರೆ ರಾಜಕೀಯ ಪಕ್ಷವು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟವನ್ನು ಎದುರಿಸಲು ಇಂಡಿಯಾ ಕೂಟವನ್ನು ರಚಿಸಿತ್ತು.
ಯಾತ್ರೆಯು ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿರುವ ಕೂಚ್ ಬೆಹಾರ್ ಜಿಲ್ಲೆಯ ಬಕ್ಷೀರ್ಹತ್ ಮೂಲಕ ರಾಜ್ಯವನ್ನು ಪ್ರವೇಶಿಸಲು ನಿರ್ಧರಿಸಲಾಗಿದೆ. ಯಾತ್ರೆಯು ಆರು ಜಿಲ್ಲೆಗಳು ಮತ್ತು ಆರು ಲೋಕಸಭಾ ಕ್ಷೇತ್ರಗಳಾದ ಡಾರ್ಜಿಲಿಂಗ್, ರಾಯ್‌ಗುಂಜ್, ಉತ್ತರ ಮತ್ತು ದಕ್ಷಿಣ ಮಾಲ್ಡಾ ಮತ್ತು ಎರಡು ಮುರ್ಷಿದಾಬಾದ್ ನಗರದಲ್ಲಿ ಹಾದು ಹೋಗಲಿದೆ.
ರಾಜ್ಯ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಪ್ರದೀಪ್ ಭಟ್ಟಾಚಾರ್ಯ ಅವರು ಆಶಾವಾದ ವ್ಯಕ್ತಪಡಿಸಿದ್ದು, “ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಬಂಗಾಳದ ಕಾಂಗ್ರೆಸ್ ಘಟಕಕ್ಕೆ ಹೊಸ ಹುರುಪನ್ನು ನೀಡಲಿದೆ. ಈ ಯಾತ್ರೆಯು ನಮಗೆ ಸಂಘಟನಾತ್ಮಕವಾಗಿ ಮಾತ್ರವಲ್ಲದೆ ಲೋಕಸಭೆ ಚುನಾವಣಾ ಪೂರ್ವದಲ್ಲಿಯೂ ಸಹಾಯ ಮಾಡುತ್ತದೆ.” ಎಂದು ಹೇಳಿದ್ದಾರೆ.