Saturday, July 27, 2024

ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ

Most read

ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುವುದು ಎಂದು ಗ್ರಾಮೀಣಾಭೀವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಭಾರತದ ಸಂವಿಧಾನ ಜಾರಿಯಾದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ‘ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ’ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿ ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಮ್ಮಿಕೊಂಡಿದ್ದ “ಸಂವಿಧಾನ ಜಾಗೃತಿ ಜಾಥಾ” ಒಂದು ತಿಂಗಳುಗಳ ಕಾಲ ರಾಜ್ಯಾದ್ಯಂತ ಸಂಚರಿಸಿ 5,400ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತಲುಪಿದೆಯಲ್ಲದೆ, ಸಮಾಜದ ಎಲ್ಲಾ ವರ್ಗದ ಜನರು ಜಾಥಾದಲ್ಲಿ ಪಾಲ್ಗೊಳ್ಳುವಂತೆ ಸಂಚಲನವುಂಟು ಮಾಡಿದೆ. ಈ ಮೂಲಕ ಸಂವಿಧಾನದ ಮಹತ್ವವನ್ನು ನಾಡಿನ ಜನತೆಗೆ ತಿಳಿಸುವಲ್ಲಿ ಈ ಕಾರ್ಯಕ್ರಮವು ಯಶಸ್ವಿಯಾಗಿದೆ ಎಮಧೂ ಸಚಿವರು ತಿಳಿಸಿದರು.

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಮಹಿಳೆಯರು, ಕಾರ್ಮಿಕರು, ಶೋಷಿತ ಹಾಗೂ ದುರ್ಬಲ ವರ್ಗಗಳೂ ಸೇರಿದಂತೆ ಈ ದೇಶದ ಬಹುಜನರಿಗೆ ಸಂವಿಧಾನದ ಮೂಲಕ ಹೊಸ ಚೈತನ್ಯ, ಭರವಸೆ ನೀಡಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತೆ ಮಾಡಿದ್ದಾರೆ. ಶೋಷಿತ ಸಮುದಾಯಗಳ ಧ್ವನಿಯಾಗಿ ಸರ್ವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.

More articles

Latest article