ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ : ಸಿಎಂ ಡಿ ಕೆ ಶಿವಕುಮಾರ್

ಮೈಸೂರು, ನ.26 :  ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಹಾಗೂ ಸಮಾನತೆಯ ರಕ್ಷಾ ಕವಚ. ಅದರ ಆಶಯ ಮತ್ತು ಮೌಲ್ಯಗಳನ್ನು ಬಾಲ್ಯದಿಂದಲೇ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪಠ್ಯಕ್ರಮದಲ್ಲಿ ಸಂವಿಧಾನಕ್ಕೆ ಸಂಬಂಧಿಸಿದ ಪಾಠಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಲಾಗುವುದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ಘೋಷಿಸಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು.

ಸಂವಿಧಾನ ಭಾರತದ ಅಂತರಾತ್ಮ. ಪ್ರಜಾಪ್ರಭುತ್ವದ ಶಕ್ತಿ. ದೇಶದ 140 ಕೋಟಿ ಜನರ ಕನಸು, ಗೌರವ ಮತ್ತು ಹಕ್ಕುಗಳನ್ನು ಕಾಪಾಡುವ ರಾಷ್ಟ್ರೀಯ ಶಕ್ತಿ. ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಿಳಿದುಕೊಳ್ಳಬೇಕು. ಅದರ ಮೌಲ್ಯಗಳನ್ನು ಪುಸ್ತಕಕ್ಕೆ ಸೀಮಿತಗೊಳಿಸದೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರತಿಪಾದಿಸಿದರು.

ಶಾಲಾ ಪಠ್ಯದಲ್ಲಿ ಸಂವಿಧಾನದ ಮೌಲ್ಯ

“ಮಕ್ಕಳಿಗೆ ಸಂವಿಧಾನದ ಆಶಯಗಳನ್ನು ಪರಿಚಯಿಸದಿದ್ದರೆ ನಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದಂತಾಗುವುದಿಲ್ಲ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳ ಜತೆಗೆ ಖಾಸಗಿ ಶಾಲೆಗಳಲ್ಲೂ ಸಂವಿಧಾನದ ಆಶಯಗಳು, ಮೂಲಭೂತ ಹಕ್ಕುಗಳು ಹಾಗೂ ಮೌಲ್ಯಗಳನ್ನು ಬೋಧಿಸುವ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಸಮಿತಿ ರಚಿಸಿ ಪಠ್ಯಪುಸ್ತಕಗಳಲ್ಲಿ ಸೂಕ್ತ ಪಾಠಗಳನ್ನು ಅಳವಡಿಸಲಾಗುವುದು. ವಿದ್ಯಾರ್ಥಿಗಳು ಸಂವಿಧಾನವನ್ನು ಕೇವಲ ಓದುವುದಷ್ಟೇ ಅಲ್ಲ, ಅದರ ತತ್ವಗಳನ್ನು ಜೀವನದಲ್ಲಿ ಪಾಲಿಸುವಂತಾಗಬೇಕು ಎಂಬುದು ಸರ್ಕಾರದ ಆಶಯ” ಎಂದರು.

“ಯುವಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವ ಗುಣ ಬೆಳೆಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಯುವ ಸಂಸತ್‌ಗಳ ರಚನೆ ಹಾಗೂ ಯುವ ನಾಯಕರನ್ನು ಗುರುತಿಸುವ ಕಾರ್ಯಕ್ರಮಗಳನ್ನೂ ರೂಪಿಸಲಾಗಿದೆ. ಮುಂದಿನ ಪೀಳಿಗೆಗೆ ಸಂವಿಧಾನದ ಮಹತ್ವ ತಲುಪಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನಗಳು ಅಗತ್ಯ” ಎಂದು ಹೇಳಿದರು.

ಮತದಾನದ ಹಕ್ಕು ಕಸಿಯುವ ಪ್ರಯತ್ನದ ವಿರುದ್ಧ ಎಚ್ಚರಿಕೆ

“ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಅತ್ಯಂತ ಅಮೂಲ್ಯವಾದ ಹಕ್ಕು ಮತದಾನದ ಹಕ್ಕು. ಪ್ರಧಾನಿಯ ಮತಕ್ಕೆ ಎಷ್ಟು ಮೌಲ್ಯವಿದೆಯೋ, ಒಬ್ಬ ಸಾಮಾನ್ಯ ನಾಗರಿಕನ ಮತಕ್ಕೂ ಅಷ್ಟೇ ಮೌಲ್ಯವಿದೆ. ಶ್ರೀಮಂತ-ಬಡವ ಎಂಬ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ಮತದಾನದ ಹಕ್ಕು ನೀಡಿರುವುದು ಪ್ರಜಾಪ್ರಭುತ್ವದ ಶ್ರೇಷ್ಠತೆ. ಆದರೆ, ಮತದಾರರ ಪಟ್ಟಿಯಿಂದ ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರ ಮತಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿರುವ ಆತಂಕವಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ‘ನಮ್ಮ ಮತ ನಮ್ಮ ಹಕ್ಕು, ನಮ್ಮ ಮತ ನಮ್ಮ ಬದುಕು’ ಎಂಬ ಅರಿವಿನೊಂದಿಗೆ ಪ್ರತಿಯೊಬ್ಬರೂ ಮತದಾನದ ಹಕ್ಕನ್ನು ರಕ್ಷಿಸಿಕೊಳ್ಳಲು ಒಗ್ಗಟ್ಟಿನಿಂದ ನಿಲ್ಲಬೇಕು” ಎಂದು ಕರೆ ನೀಡಿದರು.

“ಸಂವಿಧಾನದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುವ ಪ್ರಯತ್ನಗಳನ್ನು ದೇಶ ಗಮನಿಸುತ್ತಿದೆ. ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಪ್ರಯತ್ನ ನಡೆದರೆ ಅದು ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಧಕ್ಕೆ ತಂದಂತೆ. ವ್ಯಕ್ತಿ ಪೂಜೆಗಿಂತ ಪ್ರಜಾಪ್ರಭುತ್ವದ ರಕ್ಷಣೆ ಮುಖ್ಯ. ಸಂವಿಧಾನ ಉಳಿದರೆ ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿ ಉಳಿಯಲಿದೆ” ಎಂದು ಹೇಳಿದರು.

ಸಂವಿಧಾನವೇ ರಾಷ್ಟ್ರೀಯ ಗ್ರಂಥ, ಭಾರತದ ಅಂತರಾತ್ಮ

“ಮಹಾತ್ಮ ಗಾಂಧೀಜಿ ಮತ್ತು ಪಂಡಿತ್ ಜವಾಹರಲಾಲ್ ನೆಹರು ಅವರ ಮಾರ್ಗದರ್ಶನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಂವಿಧಾನ ರಚನೆಯ ಮಹತ್ವದ ಜವಾಬ್ದಾರಿ ನೀಡಲಾಯಿತು. ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ, ಹಕ್ಕು ಮತ್ತು ಸಮಾನತೆಯ ಅವಕಾಶ ಕಲ್ಪಿಸಿದ ಸಂವಿಧಾನ ರಚನಾ ಮಹನೀಯರಿಗೆ ಕೋಟಿ ನಮನ ಸಲ್ಲಿಸಬೇಕು. ಸಂವಿಧಾನ ನಮ್ಮೆಲ್ಲರ ನ್ಯಾಯದ ಆಧಾರ, ಸಮಾನತೆಯ ಬಂಡಾರ. ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಿದ ಪವಿತ್ರ ಗ್ರಂಥ” ಎಂದು ಬಣ್ಣಿಸಿದರು.

“ಸಂವಿಧಾನವೇ ಭಾರತದ ರಾಷ್ಟ್ರೀಯ ಗ್ರಂಥ, ಸಂವಿಧಾನವೇ ಭಾರತದ ಏಕೈಕ ಧರ್ಮ ಎಂಬ ಭಾವನೆಯೊಂದಿಗೆ ಅದನ್ನು ಉಳಿಸಿ ಬೆಳೆಸಬೇಕು. ಮನೆ ನಿರ್ಮಾಣಕ್ಕೆ ನೀಲನಕ್ಷೆ ಹೇಗೆ ಅಗತ್ಯವೋ, ದೇಶದ ನಿರ್ಮಾಣಕ್ಕೂ ಸಂವಿಧಾನದ ಬುನಾದಿ ಅಷ್ಟೇ ಮುಖ್ಯ. ಸಂವಿಧಾನ ನಿಂತ ನೀರಲ್ಲ. ಕಾಲಕ್ಕೆ ತಕ್ಕಂತೆ ಸಮಾಜದ ಅಗತ್ಯಗಳಿಗೆ ಅನುಗುಣವಾಗಿ ಬದಲಾವಣೆಗಳನ್ನು ಅಳವಡಿಸಿಕೊಳ್ಳುವ ಶಕ್ತಿ ಅದಕ್ಕಿದೆ. ಆದರೆ, ಅದರ ಮೂಲ ಆಶಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವವನ್ನು ಎಂದಿಗೂ ಮರೆಯಬಾರದು” ಎಂದರು.

ಅಧಿಕಾರ ಪ್ರಶ್ನಿಸುವ ಧೈರ್ಯ ನೀಡಿದ ಸಂವಿಧಾನ

“ಸಂವಿಧಾನ ಕೇವಲ ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಪಂಚಾಯಿತಿ ಸದಸ್ಯರಿಗೆ ಅಧಿಕಾರ ನೀಡಿಲ್ಲ. ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಧೈರ್ಯವನ್ನೂ ಸಾಮಾನ್ಯ ಜನರಿಗೆ ನೀಡಿದೆ. ನ್ಯಾಯ ಸಿಗದಿದ್ದಾಗ ನ್ಯಾಯಾಲಯದ ಮೆಟ್ಟಿಲೇರಿ ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಕೇಳುವ ಅವಕಾಶ ಪ್ರತಿಯೊಬ್ಬರಿಗೂ ಇದೆ. ಶ್ರೀಮಂತರು ಮತ್ತು ಬಡವರು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಒಂದೇ ಕಾನೂನು, ಒಂದೇ ನ್ಯಾಯ ಎಂಬ ತತ್ವವನ್ನು ಸಂವಿಧಾನ ಎತ್ತಿಹಿಡಿದಿದೆ” ಎಂದು ಹೇಳಿದರು.

“ನಾನು ರೈತನ ಮಗನಾಗಿ, ಜನರ ಪ್ರಜಾಸೇವಕನಾಗಿ ಮುಖ್ಯಮಂತ್ರಿಯಾಗಿ ಇಲ್ಲಿ ನಿಂತಿದ್ದೇನೆ. ಕಳೆದ 40 ವರ್ಷಗಳಿಂದ ವಿವಿಧ ಹಂತಗಳಲ್ಲಿ ಜನಸೇವೆ ಮಾಡಿಕೊಂಡು ಬಂದಿದ್ದೇನೆ. ನನ್ನ ಬದುಕಿಗೆ ಶಕ್ತಿ, ಧೈರ್ಯ, ಸ್ಫೂರ್ತಿ ಮತ್ತು ಪ್ರೇರಣೆ ನೀಡಿರುವುದು ಸಂವಿಧಾನ. ಅಧಿಕಾರ ನೀಡುವುದರ ಜತೆಗೆ ಜನರ ಹಕ್ಕುಗಳನ್ನು ಗೌರವಿಸುವ ಜವಾಬ್ದಾರಿಯನ್ನೂ ಅದು ನಮಗೆ ನೀಡಿದೆ” ಎಂದು ತಿಳಿಸಿದರು.

ಸಾಮಾಜಿಕ ನ್ಯಾಯವೇ ಸಂವಿಧಾನದ ಜೀವಾಳ

“ಸಂವಿಧಾನ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಮತ್ತು ನ್ಯಾಯ ಒದಗಿಸುವ ವ್ಯವಸ್ಥೆಯನ್ನು ರೂಪಿಸಿದೆ. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡುವ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು. ಸಾಮಾಜಿಕ ನ್ಯಾಯದ ಆಶಯವನ್ನು ಕಾರ್ಯರೂಪಕ್ಕೆ ತರುವ ಇಂತಹ ನಿರ್ಧಾರಗಳು ದೇಶಕ್ಕೆ ಮಾದರಿಯಾಗಿವೆ” ಎಂದರು.

“ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಸೇರ್ಪಡೆಗೊಳಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ನಿರ್ಧಾರವನ್ನು ಸ್ಮರಿಸಿದ ಅವರು, ಈ ಪದಗಳ ಸೇರ್ಪಡೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ” ಎಂದರು.

“ಕಾಂಗ್ರೆಸ್ ಪಕ್ಷದ ಇತಿಹಾಸವೇ ದೇಶದ ಇತಿಹಾಸ. ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಎಲ್ಲ ವರ್ಗಗಳಿಗೂ ನ್ಯಾಯ ಮತ್ತು ಹಕ್ಕುಗಳನ್ನು ಒದಗಿಸುವ ಕೆಲಸ ಮಾಡಿದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪಕ್ಷ ಸದಾ ಬದ್ಧವಾಗಿದೆ” ಎಂದು ಹೇಳಿದರು.

ಐದು ಗ್ಯಾರಂಟಿಗಳೂ ಸಾಮಾಜಿಕ ನ್ಯಾಯದ ಭಾಗ

“ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕುವ ಅವಕಾಶ, ಗೌರವ ಮತ್ತು ಆರ್ಥಿಕ ಭದ್ರತೆ ಸಿಗಬೇಕು. ಇದೇ ಉದ್ದೇಶದಿಂದ ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಭೂಮಿ ಗ್ಯಾರಂಟಿ ಯೋಜನೆಯೂ ಇದೇ ಆಶಯದ ಭಾಗವಾಗಿದೆ. ಬಡವರು, ರೈತರು, ಮಹಿಳೆಯರು ಹಾಗೂ ದುರ್ಬಲ ವರ್ಗಗಳ ಬದುಕಿನಲ್ಲಿ ಬದಲಾವಣೆ ತರುವುದೇ ಸರಕಾರದ ಉದ್ದೇಶ. ಎಲ್ಲರಿಗೂ ಸಮಬಾಳು, ಸಮಾನ ಅವಕಾಶ ಕಲ್ಪಿಸುವುದಕ್ಕೆ ಸರಕಾರ ಬದ್ಧವಾಗಿದೆ” ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಎಚ್ಚರಿಕೆ ಮರೆಯಬಾರದು

“ಸಂವಿಧಾನ ಎಷ್ಟೇ ಉತ್ತಮವಾಗಿದ್ದರೂ ಅದನ್ನು ಜಾರಿಗೊಳಿಸುವವರ ಮೇಲೆ ಅದರ ಯಶಸ್ಸು ಅವಲಂಬಿತವಾಗಿರುತ್ತದೆ ಎಂಬ ಡಾ.ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತನ್ನು ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕು. ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಕೇವಲ ಸರಕಾರದ ಮೇಲಷ್ಟೇ ಇಲ್ಲ. ಪ್ರತಿಯೊಬ್ಬ ಭಾರತೀಯನ ಮೇಲೂ ಇದೆ. ಸ್ವಾತಂತ್ರ್ಯ ಎಂದರೆ ಕೇವಲ ಆಳ್ವಿಕೆ ನಡೆಸುವುದಲ್ಲ. ಶತಮಾನಗಳಿಂದ ಅಸಮಾನತೆಯಿಂದ ಬಳಲುತ್ತಿರುವ ಸಮಾಜದಲ್ಲಿ ಪರಿವರ್ತನೆ ತರುವುದು ಅದರ ನಿಜವಾದ ಉದ್ದೇಶ. ಕರ್ನಾಟಕದ 12 ಮಂದಿ ಸಂವಿಧಾನ ರಚನೆಯ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಹಿರಿಯರು ಸ್ಮರಿಸಿದ್ದಾರೆ. ಕೆ.ಸಿ.ರೆಡ್ಡಿ,  ಎಸ್. ನಿಜಲಿಂಗಪ್ಪ  ಹಾಗೂ ಕೆಂಗಲ್ ಹನುಮಂತಯ್ಯ ಸೇರಿದಂತೆ ರಾಜ್ಯದ ಮಹನೀಯರ ಕೊಡುಗೆ ಮಹತ್ವದ್ದಾಗಿದೆ ಎಂದರು.

ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕಾಂಗ್ರೆಸ್ ಕೊಡುಗೆ

ಕಾಂಗ್ರೆಸ್ ಸರ್ಕಾರ ದೇಶಕ್ಕೆ ಸಂವಿಧಾನ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯನ್ನು ನೀಡಿದೆ. ವಿಶ್ವಮಾನವ ತತ್ವ ಮತ್ತು ಸಮಾನತೆಯ ಸಂದೇಶವನ್ನು ಸಾರಿದೆ. ಇವು ಕೇವಲ ದೇಶದ ಹೆಮ್ಮೆಯ ಸಂಕೇತಗಳಲ್ಲ. ಪ್ರತಿಯೊಬ್ಬ ಭಾರತೀಯನೂ ಗೌರವಿಸಿ, ಉಳಿಸಿ ಬೆಳೆಸಬೇಕಾದ ರಾಷ್ಟ್ರೀಯ ಮೌಲ್ಯಗಳು. ಈ ತತ್ವ, ಆದರ್ಶ ಮತ್ತು ಸಂದೇಶಗಳನ್ನು ಎಲ್ಲ ಸಂದರ್ಭಗಳಲ್ಲೂ ಪಾಲಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದು ಹೇಳಿದರು.

ಜಾತಿ, ಧರ್ಮ ಮೀರಿದ ಮಾನವೀಯತೆ ನಮ್ಮ ಧರ್ಮ

ಜಾತಿ, ಧರ್ಮ, ಮೇಲು-ಕೀಳು ಎಂಬ ಭಾವನೆಗಳನ್ನು ಬದಿಗಿಟ್ಟು ನಾವೆಲ್ಲರೂ ಭಾರತೀಯರು ಎಂಬ ಒಗ್ಗಟ್ಟಿನ ಭಾವನೆಯಿಂದ ಬದುಕಬೇಕು. ಕನಕದಾಸರು, ಶಿಶುನಾಳ ಶರೀಫರು, ನಾರಾಯಣ ಗುರುಗಳು ಸೇರಿದಂತೆ ಅನೇಕ ಮಹನೀಯರು ಸಾರಿದ ಸಮಾನತೆ ಮತ್ತು ಮಾನವೀಯತೆಯ ಸಂದೇಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಮಾನವೀಯತೆಯೇ ನಮ್ಮ ಧರ್ಮವಾಗಬೇಕು. ಪ್ರತಿಯೊಬ್ಬರಿಗೂ ಸಮಾನ ಗೌರವ ಸಿಗುವ ಸಮಾಜ ನಿರ್ಮಾಣವಾಗಬೇಕು ಎಂದು ಹೇಳಿದರು.

More articles

Latest article

Most read