ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರಿದ ಮಳೆಯ ಅಬ್ಬರ
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ ಸೃಷ್ಟಿಯಾಗಿದೆ.
ಸಕಲೇಶಪುರ ತಾಲ್ಲೂಕಿನ, ಗುಲಗಳಲೆ ಗ್ರಾಮದ ರಾಟೆಮನೆ ಸಮೀಪ ಈ ಘಟನೆ ಸಂಭವಿಸಿದ್ದು 40 ಅಡಿಯಷ್ಟು ಎತ್ತರಕ್ಕೆ ನಿರ್ಮಿಸಿದ್ದ ತಡೆಗೋಡೆ ರಾತ್ರಿ ಸುರಿದ ಭಾರೀ ಮಳೆಗೆ ಕುಸಿದು ಬಿದ್ದಿದೆ.
ಬಿರುಕು ಬಿಡುತ್ತಿರುವ ಕಾಂಕ್ರೀಟ್ ರಸ್ತೆ, ವಾಹನ ಸಂಚಾರ ಹೆಚ್ಚಿರುವ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿದೆ.
ಭಾರೀ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು
ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದು. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ ಮಠದಕೊಪ್ಪಲು ಗ್ರಾಮದ ಬಳಿ ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರು ಕೆರೆಗೆ ಉರುಳಿ ಬೀಳುತ್ತಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಜೆಸಿಬಿ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು.