ಸಹಕಾರ ಸಂಸ್ಥೆಗಳು ಪಕ್ಷಾತೀತವಾಗಿ ಬೆಳೆಯಬೇಕು; ಕೆ.ಎನ್.ರಾಜಣ್ಣ

ಮಂಗಳೂರು: ಸಹಕಾರ ಸಂಸ್ಥೆಗಳು ಜಾತ್ಯತೀತ, ಪಕ್ಷಾತೀತವಾಗಿ ಕಾರ್ಯ ನಿರ್ವಹಣೆ ಮಾಡುವಂತಾಗಬೇಕು ಮತ್ತು ಜನರ ಆಂದೋಲನವಾಗಿ ರೂಪುಗೊಳ್ಳಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೆಚ್ಚು ಮಾಡುವ ಜೊತೆಗೆ ಅವರ ಬೇಡಿಕೆ ಪೂರೈಸಿದರೆ ಸಹಕಾರ ಕ್ಷೇತ್ರ ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ ಎಂದರು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ಗ್ರಾಮೀಣ ಜನರು, ರೈತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಅನೇಕ ಹಿರಿಯರ ತ್ಯಾಗ ಮತು ನಿಸ್ವಾರ್ಥ ಸೇವೆಯಿಂದ ಸಹಕಾರ ಕ್ಷೇತ್ರ ಬೃಹತ್ ಮಟ್ಟದಲ್ಲಿ ಬೆಳೆದಿದೆ. ಈ ಕ್ಷೇತ್ರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಿದೆ ಎಂದು ಹೇಳಿದರು.

ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಲಕ್ಷ್ಮಣ ಸವದಿ, ಎಸ್ ಡಿಸಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

More articles

Latest article

Most read