ನಾಳೆ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ; ಮತ ಎಣಿಕೆ ಕೇಂದ್ರಗಳಿಗೆ ಬಿಗಿಭದ್ರತೆ; ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟ

Most read

ಬೆಂಗಳೂರು: ಹತ್ತು ದಿನಗಳ ಹಿಂದೆ ಉಪ ಚುನಾವಣೆ ನಡೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ ನಾಳೆ ಶನಿವಾರ ನಡೆಯಲಿದೆ. ಮೂರೂ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. 12 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಮತ್ತು ಎನ್ ಡಿಎ ಮೈತ್ರಿ ಕೂಟದ ಉಮೇದುವಾರರಾಗಿ ನಿಖಿಲ್ ಕುಮಾರಸ್ವಾಮಿ ಎದುರಾಳಿಗಳಾಗಿದ್ದರು. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹಮದ್ ಪಠಾಣ್ ಸ್ಪರ್ಧಿಸಿದ್ದರು. ಸಂಡೂರು ಎಸ್ ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಸ್ಪರ್ಧಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿದೆ. ರಾಮನಗರದ ಹೊರ ವಲಯದಲ್ಲಿರುವ ಅರ್ಚಕರ ಹಳ್ಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನಲ್ಲಿ ಮತ ಎಣಿಕೆ ನಡೆಯಲಿದೆ.

ಉಪ ಚುನಾವಣೆಯ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಭದ್ರವಾಗಿಟ್ಟಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸ್ಟ್ಯಾಂಗ್ ರೂಂ ಅನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಬೆಳಿಗ್ಗೆ 6.45ಕ್ಕೆ ತೆರೆಯಲಾಗುವುದು’ ಎಂದು ನಗರದ ಡಿ.ಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದರು. ಬೆಳಿಗ್ಗೆ 7.30ಕ್ಕೆ ಒಂದು ಕೊಠಡಿಯಲ್ಲಿ ಅಂಚೆ ಮತ ಹಾಗೂ 8 ಗಂಟೆಗೆ ಎರಡು ಕೊಠಡಿಗಳಲ್ಲಿ ಇವಿಎಂ ಮತ ಎಣಿಕೆ ಆರಂಭವಾಗಲಿದೆ. ಒಟ್ಟು 14 ಟೇಬಲ್ಗಳಲ್ಲಿ 20 ಸುತ್ತುಗಳಲ್ಲಿ ನಡೆಯಲಿರುವ ಎಣಿಕೆ ಕಾರ್ಯಕ್ಕೆ 69 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ 23 ಮೇಲ್ವಿಚಾರಕರು, 23 ಸಹಾಯಕರು ಹಾಗೂ 23 ಸೂಕ್ಷ್ಮ ವೀಕ್ಷಕರು ಇರಲಿದ್ದಾರೆ. ರಾಜಕೀಯ ಪಕ್ಷಗಳ 250 ಏಜೆಂಟರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ಪ್ರತಿ ಟೇಬಲ್ ರಾಜಕೀಯ ಪಕ್ಷಗಳ ಇಬ್ಬರು ಏಜೆಂಟರಿಗೆ ಪಾಸ್ ವಿತರಿಸಲಾಗಿದೆ. ಅಹಿತಕರ ಘಟನೆಗಳಿಗೆ ಅವಕಾಶ ಇಲ್ಲದಂತೆ ಕಾಲೇಜಿನ ಹೊರಗ ಮತ್ತು ಒಳಗೆ ಮೂರು ಸುತ್ತಿನ ಭದ್ರತೆ ಒದಗಿಸಲಾಗಿದೆ. ಜಿಲ್ಲೆಆದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುತದೆ ಎಂದು ಜಿಲ್ಲಧಿಕಾರಿಗಳು ತಿಳಿಸಿದ್ದಾರೆ.

ಸಂಡೂರು ವಿಧಾನಸಭ ಉಪ ಚುನಾವಣೆಯ ಮತ ಎಣಿಕೆ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರಾಜೇಶ್ ಎಚ್. ಡಿ. ಅವರು ನ.23 ರಂದು ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ 7 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದ. ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು 14+1 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದರು. ಮತ ಎಣಿಕೆ ಕೇಂದರದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

More articles

Latest article