Sunday, September 8, 2024

ಹೆಚ್​ ಡಿ ರೇವಣ್ಣ ಜಾಮೀನು ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಸ್​ಐಟಿ

Most read

ಮನೆ ಕೆಲಸದ ಮಹಿಳೆಯ ಅಪಹರಣ ಆರೋಪದಲ್ಲಿ ಶಾಸಕ ಹೆಚ್​.ಡಿ.ರೇವಣ್ಣ ಅವರಿಗೆ ಮಂಜೂರಾಗಿರುವ ಜಾಮೀನು ರದ್ದುಕೋರಿ ವಿಶೇಷ ತನಿಖಾ ದಳ (ಎಸ್​ಐಟಿ) ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಎಸ್​ಐಟಿ ಸಲ್ಲಿಸಿರುವ ಅರ್ಜಿ ಮೇ 31ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಎದುರಾಗುತ್ತಿದ್ದಂತೆ ಮಹಿಳೆಯೊಬ್ಬರು ನಾಪತ್ತೆಯಾಗಿದ್ದರು. ಈ ಕುರಿತು ಮಹಿಳೆಯ ಮಗ, ಕೆ.ಆರ್​.ನಗರದ ಪೊಲೀಸ್​ ಠಾಣೆಯಲ್ಲಿ ಅಪಹರಣ ದೂರು ದಾಖಲಿಸಿದ್ದರು.

ಹಾಗೆಯೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್​ ರೇವಣ್ಣ ಮತ್ತು ಹೆಚ್​ ರೇವಣ್ಣ ವಿರುದ್ಧ ಮತ್ತೋರ್ವ ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಈ ನಡುವೆ, ಇಡೀ ಪೆನ್​ ​ಡ್ರೈವ್​ ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳವನ್ನು ಸರ್ಕಾರ ರಚನೆ ಮಾಡಿ ಆದೇಶಿಸಿತ್ತು. ಎರಡೂ ಪ್ರಕರಣಗಳಲ್ಲಿ ಹೆಚ್​.ಡಿ.ರೇವಣ್ಣ ಅವರಿಗೆ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದೀಗ ಎರಡೂ ಪ್ರಕರಣಗಳಲ್ಲಿ ವಿಶೇಷ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನನ್ನು ರದ್ದು ಮಾಡುವಂತೆ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.

ಈ ನಡುವೆ ಹೊಳೆನರಸೀಪುರ ಮತ್ತು ಕೆ.ಆರ್​.ನಗರ ಪೊಲೀಸ್​ ಠಾಣೆಗಳಲ್ಲಿ ದಾಖಲಾಗಿರುವ ಎಫ್​ಐಆರ್​ ರದ್ದುಪಡಿಸುವಂತೆ ಕೋರಿ ಹೆಚ್.ಡಿ.ರೇವಣ್ಣ ಅವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.

More articles

Latest article