ಬೆಂಗಳೂರು. ಅ. 8: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ಸೆಷನ್ಸ್ ಕೋರ್ಟ್ ಅಕ್ಟೋಬರ್ 13ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ಪ್ರಕರಣದಲ್ಲಿ ಚಿಕ್ಕಣ್ಣ ಅವರನ್ನು CW-80 ಹಾಗೂ ಯಶಸ್ ಸೂರ್ಯ ಅವರನ್ನು CW-98 ಸಾಕ್ಷಿಗಳಾಗಿ ಉಲ್ಲೇಖಿಸಲಾಗಿದೆ.
ರೇಣುಕಾಸ್ವಾಮಿ ಕೊಲೆಗೂ ಮುನ್ನ ನಟ ದರ್ಶನ್ ಭಾಗಿಯಾಗಿದ್ದ ಸ್ಟೋನಿ ಬ್ರೂಕ್ ಪಾರ್ಟಿಯಲ್ಲಿ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಕೂಡ ಭಾಗಿಯಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಾರ್ಟಿ ಹಾಗೂ ಅಂದು ನಡೆದ ಬೆಳವಣಿಗೆಗಳ ಕುರಿತು ಸಾಕ್ಷ್ಯ ನೀಡಲು ಇಬ್ಬರಿಗೂ ನ್ಯಾಯಾಲಯ ಸಮನ್ಸ್ ನೀಡಿದೆ.
ಪ್ರಕರಣದ ವಿಚಾರಣೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಇಬ್ಬರು ನಟರ ಹೇಳಿಕೆಗಳು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ಭಾಗವಾಗಲಿವೆ. ಅಕ್ಟೋಬರ್ 13ರಂದು ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಬಳಿ ಇರುವ ಮಾಹಿತಿಯನ್ನು ದಾಖಲಿಸುವ ಸಾಧ್ಯತೆ ಇದೆ.

