ಕೋರ್ಟ್ ತೀರ್ಪು ಪಾಲಿಸಲು ನಿರ್ಲಕ್ಷ್ಯ: ಸಕಲೇಶಪುರ ತಹಶೀಲ್ದಾರ್ ಕಚೇರಿ ವಾಹನ, ಪೀಠೋಪಕರಣ ಜಪ್ತಿ

ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರ ನೀಡಲು ನಿರ್ಲಕ್ಷ್ಯ ತೋರಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ಉಪವಿಭಾಗಾಧಿಕಾರಿ ಕಚೇರಿಯ ವಾಹನ ಹಾಗೂ ಪೀಠೋಪಕರಣಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

1994ರಲ್ಲಿ ಬೇಲೂರು ಚನ್ನಕೇಶವ ದೇವಾಲಯಕ್ಕೆ ಹೊಂದಿಕೊಂಡಿದ್ದ ಸುದೀಂದ್ರ ಹಾಗೂ ರಾಮು ಎಂಬವರ 800 ಚದರ ಅಡಿ ಭೂಮಿಯನ್ನು ಹೋಟೆಲ್ ನಿರ್ಮಾಣಕ್ಕಾಗಿ ಪ್ರವಾಸೋದ್ಯಮ ಇಲಾಖೆ ಸ್ವಾಧೀನ ಪಡಿಸಿಕೊಂಡಿತ್ತು. ಈ ವೇಳೆ ಪ್ರತಿ ಚದರ ಅಡಿಗೆ ಇಲಾಖೆ 277 ರೂ.ಗಳಂತೆ ಪರಿಹಾರ ನೀಡಿತ್ತು. ಹೆಚ್ಚಿನ ಪರಿಹಾರ ನೀಡುವಂತೆ ಸುದೀಂದ್ರ ಹಾಗೂ ರಾಮು ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಸುದೀರ್ಘ ವಿಚಾರಣೆ ನಂತರ ಚದರ ಅಡಿಗೆ 950 ರೂ. ನಂತೆ 1.75 ಕೋಟಿ ರೂ. ಪರಿಹಾರ ನೀಡುವಂತೆ ಅಂದಿನ ಭೂ ಸ್ವಾಧೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶಿಸಿತ್ತು.

ತೀರ್ಪು ಪ್ರಕಟಗೊಂಡು 7 ವರ್ಷ ಕಳೆದರೂ ಪರಿಹಾರ ನೀಡದೆ ಇರುವುದರಿಂದ ಉಪವಿಭಾಗಾಧಿಕಾರಿ ಕಚೇರಿ ಜಪ್ತಿಗೆ ಬೇಲೂರು ನ್ಯಾಯಾಲಯ ಆದೇಶಿಸಿತ್ತು. ಆದೇಶದ ಅನ್ವಯ 2 ಲಾರಿಗಳಲ್ಲಿ ಅಧಿಕಾರಿಗಳು ಕಚೇರಿಯ ಪೀಠೋಪಕರಣಗಳನ್ನು ತುಂಬಿಕೊಂಡು ನ್ಯಾಯಾಲಯಕ್ಕೆ ಕೊಂಡೊಯ್ದಿದ್ದಾರೆ.

More articles

Latest article

Most read