ನಟ ದುನಿಯಾ ವಿಜಯ್‌ ಪತ್ನಿ ನಾಗರತ್ನಗೆ 2 ಕೋಟಿ ರೂ. ಪರಿಹಾರ ನೀಡುವಂತೆ ಕೋರ್ಟ್‌ ಆದೇಶ

ಬೆಂಗಳೂರು ಸೆ.3: ಹಲವು ವರ್ಷಗಳಿಂದ ಕಾನೂನು ಹೋರಾಟಕ್ಕೆ ಕಾರಣವಾಗಿದ್ದ ನಟ ದುನಿಯಾ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ಕಾನೂನುಬದ್ಧವಾಗಿ ಅಂತ್ಯ ಹಾಡಿದೆ. ವಿಚ್ಛೇದನ ಮಂಜೂರು ಮಾಡಿರುವ ನ್ಯಾಯಾಲಯ, ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶವನ್ನು ಒನ್‌ಟೈಮ್‌ ಸೆಟ್ಲ್‌ಮೆಂಟ್‌ ರೂಪದಲ್ಲಿ ನೀಡುವಂತೆ ವಿಜಯ್ ಅವರಿಗೆ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ಎಚ್. ಶಾಂತಿಭೂಷಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ. ನಾಗರತ್ನ ಅವರ ಜೀವನ ನಿರ್ವಹಣೆ, ದಂಪತಿಯ ಮೂವರು ಮಕ್ಕಳ ಭವಿಷ್ಯ, ವಿಜಯ್ ಅವರ ಸಾಮಾಜಿಕ ಸ್ಥಾನಮಾನ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸಿ ₹2 ಕೋಟಿ ಮೊತ್ತವನ್ನು ನಿಗದಿಪಡಿಸಲಾಗಿದೆ ಎಂದು ವರದಿಯಾಗಿದೆ.

ದುನಿಯಾ ವಿಜಯ್ ಮತ್ತು ನಾಗರತ್ನ 1999ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ. ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡ ಬಳಿಕ 2013ರಲ್ಲಿ ವಿಜಯ್ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. 2014ರಲ್ಲಿ ಇಬ್ಬರ ನಡುವೆ ಸಂಧಾನವಾಗಿ ಮತ್ತೆ ಒಟ್ಟಿಗೆ ಜೀವನ ನಡೆಸಲು ಮುಂದಾಗಿದ್ದರು. ಆದರೆ ನಂತರ ಮತ್ತೆ ವೈಮನಸ್ಸು ಉಂಟಾಗಿ ಕಾನೂನು ಹೋರಾಟ ಮುಂದುವರಿದಿತ್ತು.

2018ರಲ್ಲಿ ವಿಜಯ್ ಮತ್ತೊಮ್ಮೆ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು. ನಾಗರತ್ನ ಅವರಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಕ್ರೌರ್ಯ ಹಾಗೂ ಮಾನಸಿಕ ಕಿರುಕುಳವಾಗಿದೆ ಎಂಬ ಆರೋಪಗಳನ್ನು ಅವರು ಮಾಡಿದ್ದರು. ಆದರೆ ಈ ಆರೋಪಗಳನ್ನು ಸಮರ್ಪಕವಾಗಿ ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂಬ ಕಾರಣಕ್ಕೆ 2024ರಲ್ಲಿ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ವಿಜಯ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ವರ್ಷಗಳ ಕಾಲ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿರುವುದು ಹಾಗೂ ದಾಂಪತ್ಯ ಸಂಬಂಧದಲ್ಲಿ ಹೊಂದಾಣಿಕೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಪರಿಗಣಿಸಿದ ಹೈಕೋರ್ಟ್ ಇದೀಗ ವಿಚ್ಛೇದನಕ್ಕೆ ಅನುಮತಿ ನೀಡಿದೆ.

More articles

Latest article

Most read