ವಿನಯ್‌ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ

ಬೆಂಗಳೂರು :  ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ವಿನಯ್‌ ಕುಲಕರ್ಣಿ ಹಾಗೂ ಕುಟುಂಬಸ್ಥರು ತೀರ್ಪು ಪ್ರಕಟವಾಗುತ್ತಿದ್ದಂತೆ ಕಣ್ಣೀರು ಹಾಕಿದ್ದಾರೆ. 

10 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದ  ನ್ಯಾಯಾಲಯ, ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದರು. ನಾಳೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.  ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಪೈಕಿ 19  ಮಂದಿ ಆರೋಪಿಗಳು ದೋಷಿ ಎಂದು ನ್ಯಾಯಾಲಯ ಹೇಳಿದೆ.  

19 ಆರೋಪಿಗಳು ದೋಷಿ
ಎ20 ಮತ್ತು  ಎ21 ಆರೋಪಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ.  ನ್ಯಾಯಾಲಯ 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. 
ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇದರಿಂದ ಇವರಿಬ್ಬರನ್ನು ಹೊರತುಪಡಿಸಿ ಉಳಿದವರ ತೀರ್ಪು ಪ್ರಕಟಿಸಿದೆ. ಇನ್ನು ಪ್ರಕರಣದ ಎ20 ವಾಸುದೇವ ನಿಲೇಕಣಿ, ಎ21 ಸೋಮಶೇಖರ ಅವರ ಬಿಡುಗಡೆಗೆ ಕೋರ್ಟ್ ಆದೇಶಿಸಿದೆ.

ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್, ಎ20 ವಾಸುದೇವ ನಿಲೇಕಣಿ, ಎ21 ಸೋಮಶೇಖರ್ ನ್ಯಾಮಗೌಡ ಆರೋಪಿಗಳು. 

More articles

Latest article

Most read