ಮಾಫಿ ಸಾಕ್ಷಿ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಯ ಮನವಿಯನ್ನು ತಿರಸ್ಕರಿಸಿದ ಕೋರ್ಟ್‌

ಬೆಂಗಳೂರು : ಮಾಫಿ ಸಾಕ್ಷಿ ಪರಿಗಣಿಸುವಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್​ ನಡೆಸಿದೆ.

ಮಾಫಿಸಾಕ್ಷಿ ಆಗಲು ಪ್ರದೋಷ್ ಸಲ್ಲಿಸಿದ ಅರ್ಜಿ ಕಾನೂನಿನ ಪ್ರಕಾರ ತೀರ್ಮಾನ ಆಗಲಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಯಾವುದೇ ಹಕ್ಕು ಇಲ್ಲ ಎಂದು ದರ್ಶನ್ ಪರ ವಕೀಲರ ಮನವಿ ತಿರಸ್ಕರಿಸಿದ ಕೋರ್ಟ್‌ ತಿಳಿಸಿದೆ.

ವಿಡಿಯೋ ಕಾನ್ಸೆರೆನ್ಸ್ ಮೂಲಕ ದರ್ಶನ್, ಪವಿತ್ರಾ ಗೌಡ ಪ್ರದೋಷ್, ನಾಗರಾಜ್, ಲಕ್ಷ್ಮಣ್ ಹಾಗೂ ಜಗದೀಶ್ ವಿಚಾರಣೆಗೆ ಹಾಜರಾಗಿದ್ದರು. ಮೊನ್ನೆಯ ವಿಚಾರಣೆಯಲ್ಲಿ ಪ್ರದೋಷ್ ಮಾಫಿ ಸಾಕ್ಷಿಗೆ ಪ್ರಾಸಿಕ್ಯೂಷನ್ ಷರತ್ತುಬದ್ಧ ಒಪ್ಪಿಗೆ ಕೊಟ್ಟಿದ್ದ ಹಿನ್ನೆಲೆ, ಇಂದು ದರ್ಶನ್ ಪರ ವಕೀಲ ಹಸ್ಮತ್ ಪಾಷಾ ಅವರು, ಇದು ಸಾಕ್ಷಿಗಳು ಕೊರತೆ ಇರುವ ಪ್ರಕರಣವಲ್ಲ. ಇದರಲ್ಲಿ ಸಾಕಷ್ಟು ಸಾಕ್ಷಿಗಳಿವೆಂದು ಪ್ರಾಸಿಕ್ಯೂಷನ್ ಹೇಳಿದೆ. ಹೀಗಾಗಿಯೂ ಮಾಫಿ ಸಾಕ್ಷಿ ಪಡೆಯಲು ಮುಂದಾಗಿರುವುದು ಯಾಕೆ? ಇದಕ್ಕೆ ನಾವು ಆಕ್ಷೇಪಣೆ ಸಲ್ಲಿಕೆ ಮಾಡುತ್ತೇವೆ ಎಂದಿದ್ದರು.

ಸೋಮವಾರ ದರ್ಶನ್ ಸೇರಿದಂತೆ ಇತರರು ತಮ್ಮ ವಾದವನ್ನೂ ಆಲಿಸಬೇಕೆಂದು ಕೋರಿದ್ದ ಮನವಿಯನ್ನು ಕೋರ್ಟ್ ತಿರಸ್ಕೃತ ಮಾಡಿದೆ. ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿ ಪರಿಗಣಿಸಬೇಕೋ ಬೇಡವೋ ಎನ್ನುವುದನ್ನು ಇನ್ನು ತೀರ್ಮಾನಿಸಿಲ್ಲ. ಮಾಫಿ ಸಾಕ್ಷಿ ಅರ್ಜಿಯನ್ನು ಕಾನೂನಿಯಂತೆ ತೀರ್ಮಾನಿಸಲಾಗುತ್ತದೆ ಎಂದು ಜಡ್ಜ್ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಹೇಳಿದ್ದಾರೆ.

ಮಾಫಿ ಸಾಕ್ಷಿ ಆಕ್ಷೇಪಣೆಗೆ ಇಲ್ಲವಾಗಿದ್ದು, ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಇದರಿಂದ ದೊಡ್ಡ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಯನ್ನು ಪರಿಗಣಿಸುವ ಕುರಿತು ಪ್ರತ್ಯೇಕ ಆದೇಶ ಹೊರಡಿಸುವುದಾಗಿ ಕೋರ್ಟ್ ಇದೇ ಸಂದರ್ಭದಲ್ಲಿ ಹೇಳಿದೆ.

More articles

Latest article

Most read