ಬೆಂಗಳೂರು: ಕಾಂತಾರ ಚಿತ್ರದ ನಾಯಕನಟಿ ಸಪ್ತಮಿ ಗೌಡ ವಿರುದ್ಧ ಮಾನಹಾನಕಾರಿ ಹೇಳಿಕೆ ನೀಡದಂತೆ ನ್ಯಾಯಾಲಯ ಯುವ ರಾಜಕುಮಾರ್ ಪತ್ನಿ ಶ್ರೀದೇವಿ ಅವರಿಗೆ ನಿರ್ಬಂಧ ಹೇರಿದೆ.
ನಟ ಯುವ ರಾಜಕುಮಾರ್ ಮತ್ತು ಶ್ರೀದೇವಿ ಬೈರಪ್ಪ ದಾಂಪತ್ಯದಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ಶ್ರೀದೇವಿ ಅವರು ನಟಿ ಸಪ್ತಮಿಗೌಡ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಶ್ರೀದೇವಿ ಭೈರಪ್ಪ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಪ್ತಮಿ ಗೌಡ ತಮ್ಮ ವಿರುದ್ಧ ಮಾನಹಾನಕಾರಿ ಹೇಳಿಕೆ ನೀಡದಂತೆ ನಿರ್ಬಂಧಿಸಬೇಕು ಎಂದು ಕೋರಿದ್ದರು.
ಯುವ- ಶ್ರೀದೇವಿ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಲಾಗುತ್ತಿದೆ. ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಚಾರಿತ್ರ್ಯ ವಧೆ ಮಾಡಲಾಗುತ್ತಿದೆ ಎಂದು ಅವರು ದೂರಿನಲ್ಲಿ ಹೇಳಿದ್ದರು.
ಸಪ್ತಮಿ ಗೌಡ ಅವರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ಸಪ್ತಮಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ಆದೇಶ ಹೊರಡಿಸಿದ್ದು, ಈ ಸಂಬಂಧ ಶ್ರೀದೇವಿ ಭೈರಪ್ಪ ಅವರಿಗೂ ನೋಟಿಸ್ ಜಾರಿಗೊಳಿಸಿದೆ.