ಹೊಸದಿಲ್ಲಿ: ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಾರ್ಚ್ 22 ರಂದು ಬಂಧನಕ್ಕೊಳಗಾಗಿದ್ದ ಅರವಿಂದ ಕೇಜ್ರಿವಾಲ್ ಅವರ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ ನ್ಯಾಯಾಲಯದ ಆದೇಶದಂತೆ ಕಸ್ಟಡಿಗೆ ಪಡೆದುಕೊಂಡಿತ್ತು. ಇಂದು ಕಸ್ಟಡಿ ಅವಧಿ ಮುಗಿದ ನಂತರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ರೌಸ್ ಅವೆನ್ಯೂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸುವುದರೊಂದಿಗೆ ಕೇಜ್ರಿವಾಲ್ ಜೈಲುವಾಸ ಅನುಭವಿಸಬೇಕಾಗಿದೆ