Saturday, July 27, 2024

ಹೊಸ ವರ್ಷದ ಸಂಭ್ರಮಾಚರಣೆಗೆ ಕೋವಿಡ್ ಭೀತಿ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

Most read

ಕೇರಳ ರಾಜ್ಯದಲ್ಲಿ ಕರೋನಾ ಹಾಗೂ ರೂಪಾಂತರ ತಳಿ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ  ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿ ಪ್ರಕಾರ ಗಡಿ ಜಿಲ್ಲೆಗಳಲ್ಲಿ ತಪಾಸಣೆ ಹೆಚ್ಚಳ ಮಾಡಲು ಸೂಚನೆ ನೀಡಲಾಗಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಆದರೆ ಯಾವುದೇ ಹೊಸ ನಿರ್ಬಂಧ ಹೇರುವ ಅವಶ್ಯಕತೆ ಇರುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಇನ್ನು ಅಂತರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಕೋವಿಡ್‌ 19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ತಪಾಸಣೆ ನಡೆಸಿ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ.

ಇನ್ನು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಕಾರ್ಯಾಚರಣೆ ಸಿದ್ಧತೆಗಳನ್ನು ಖಚಿತ ಪಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಡಿಸೆಂಬರ್ 3- 4 ನೇ ವಾರದೊಳಗೆ ಅಣಕು ಪ್ರದರ್ಶನವನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.

ತೀವ್ರ ಸ್ವರೂಪದ ರೋಗ ಲಕ್ಷಣ ಹೊಂದಿದವರು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, SARI ಪ್ರಕರಣಗಳು ಹಾಗೂ ಸುಧೀರ್ಘ ಅವಧಿಗೆ ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, ಕೋವಿಡ್ ಲಸಿಕೆಯ ಎರಡು ಡೋಸ್ ವ್ಯಾಕ್ತಿನ್ ಪಡೆದ ನಂತರವೂ ಸೋಂಕು ಮೃತಪಟ್ಟವರು, ಕೋವಿಡ್ -19 ಮರಣ ಪ್ರಕರಣಗಳು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವರದಿಯಾಗುವ 25ಕ್ಕಿಂತ ಕಡಿಮೆ CT Value ಇರುವ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಗೆ ಜಿನೋಮ್ ಸಿಕ್ವೇನ್ಸಿಂಗ್ ಪರೀಕ್ಷೆಗೆ ಕಳುಹಿಸುವ ನಿಟ್ಟಿನಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಅಗತ್ಯ ಸಮನ್ವಯ ವಹಿಸಬೇಕು ಎಂದು ಹೇಳಲಾಗಿದೆ.

ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು

1. ಎಲ್ಲ ಹಿರಿಯ ನಾಗರಿಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.

2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.

3. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.

4. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರಿಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.

3. ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್‌ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ, ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

More articles

Latest article