ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ SIT ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಅವರಿಗೆ ಸಂಕಷ್ಟ ಎದುರಾಗಿದೆ.
ಕೋವಿಡ್ ಹಗರಣ ಕುರಿತಂತೆ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ. ಸಿಎನ್ ಮಂಜುನಾಥ್ ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದರು. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದೀಗ ಸಂಸದ ಮಂಜುನಾಥ್ ಅವರಿಗೆ ಸಂಕಷ್ಟ ತಂದಿದೆ.
ಕೊವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸಚಿವ ಎಚ್ ಕೆ ಪಾಟೀಲ್ ಸ್ಪಷ್ಟಪಡಿಸಿದರು.