ಬೆಂಗಳೂರು ಗ್ರಾಮಾಂತರಕ್ಕೆ ಡಿಕೆ ಸುರೇಶ್ ವಿರುದ್ಧ ಅಶ್ವತ್ಥ್ ನಾರಾಯಣ ಅಥವಾ ಆರ್ ಅಶೊಕ್ ಸ್ಪರ್ಧೆ: ಯೋಗೇಶ್ವರ್

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿಕೆ ಸುರೇಶ್​ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಡಾ. ಸಿಎನ್ ಮಂಜುನಾಥ್​ ಕಣಕ್ಕಿಳಿಸಬೇಕೆಂಬ ಚರ್ಚೆಗಳು ನಡೆಯುತ್ತಿರುವ  ಬೆನ್ನಲ್ಲೇ, ಶಾಸಕ ಅಶ್ವತ್ಥ್ ನಾರಾಯಣ, ವಿಪಕ್ಷ ನಾಯಕ ಆರ್ ಅಶೊಕ್ ಸ್ಪರ್ಧೆ ಮಾಡಬಹುದು ಎಂದು ಖುದ್ದು ಸಿಪಿ ಯೋಗೇಶ್ವರ್  ಅಚ್ಚರಿ ಹೇಳಿಕೆ ನೀಡಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಪಿ ಯೋಗೇಶ್ವರ್, ಬೆಂಗಳೂರು ಗ್ರಾಮಾಂತರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ. ಅಶ್ವಥ್ ನಾರಾಯಣ್ ಡಿಸಿಎಂ ಆಗಿದ್ದವರು, ಉಸ್ತುವಾರಿ ಸಚಿವರಾಗಿದ್ದರು. ಇನ್ನು ಆರ್ ಅಶೋಕ್ ವಿರೋಧ ಪಕ್ಷದ ನಾಯಕರು ಸ್ಪರ್ಧಿಸಲು ಸಮರ್ಥರಿದ್ದಾರೆ. ಅವರೂ ಸಹ ಬೆಂಗಳೂರು ಗ್ರಾಮಾಂತರಿಂದ ಸ್ಪರ್ಧೆ ಮಾಡಬಹುದು ಎಂದು ಅಚ್ಚರಿಕೆ ಹೇಳಿಕೆ ನೀಡಿದರು.

ಇನ್ನು ಇದೇ ವೇಳೆ ಕುಮಾರಸ್ವಾಮಿ ಜೊತೆಗಿನ ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಯೋಗೇಶ್ವರ್, ನಿನ್ನೆ(ಮಾರ್ಚ್ 05) ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಆಗಿದೆ. ಎರಡು ದಿನಗಳಲ್ಲಿ ಅಭ್ಯರ್ಥಿ ಯಾರು ಎನ್ನುವುದು ಗೊತ್ತಾಗಲಿದೆ. ನಾನು ಮಂಜುನಾಥ್ ಅವರನ್ನು ಒಪ್ಪಿಸುವ ಕೆಲಸ ಮಾಡಿದ್ದು. ಅಂತಿಮವಾಗಿ ಪಕ್ಷ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

More articles

Latest article

Most read