Thursday, December 12, 2024

MLC ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಸಿ.ಪಿ ಯೋಗೇಶ್ವರ್

Most read

ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ ಪಿ ಯೋಗೇಶ್ವರ್ ಅವರು ಸೋಮವಾರ ತಮ್ಮ MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ.

ಇಂದು ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜೀನಾಮೆ ಬಳಿಕ ಹೊರಟ್ಟಿ ನಿವಾಸದ ಬಳಿ ಸುದ್ದಿಗಾರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಕೇಳಿದಾಗ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚುನಾವಣೆಗೆ ಸ್ಪರ್ಧಿಸಬೇಕಾದರೆ, MLC ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಆದ್ದರಿಂದ ರಾಜೀನಾಮೆ ಕೊಟ್ಟಿದ್ದೀನಿ. ನಾನು ಯಾವುದೇ ಪಕ್ಷ ಸೇರುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಅಷ್ಟೇ. ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾನು ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆಂದು ಬಯಕೆಯಿದೆ. ನನಗೊಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೇನೆ ಎಂದಿದ್ದಾರೆ.

More articles

Latest article