ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಮಾತುಕತೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿದ್ದಾರೆ. ಅದಕ್ಕೂ ಮುನ್ನವೇ ವಾಟ್ಸ್‌ಆ್ಯಪ್ ಮೂಲಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯಂದ್ರ ಅವರಿಗೆ ವಾಟ್ಸ್ ಆ್ಯಪ್ ಮೂಲಕ ಸಿ.ಪಿ. ಯೋಗೇಶ್ವರ್ ಅವರು ರಾಜೀನಾಮೆ ಸಂದೇಶವನ್ನು ರವಾನಿಸಿದ್ದಾರೆಂದು ತಿಳಿದುಬಂದಿದೆ.
ಇಂದು ಬೆಳಗ್ಗೆ 11:30 ಗಂಟೆ ಸುಮಾರಿಗೆ ಸಿಪಿವೈ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಡಿಸಿಎಂ ಡಿಕೆಶಿ, ಮಾಜಿ ಸಂಸದ ಡಿ.ಕೆ. ಸುರೇಶ್, ಮದ್ದೂರು ಶಾಸಕ ಉದಯ್ ಗೌಡ, ಸಚಿವ ಜಮೀರ್ ಅಹ್ಮದ್, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಸಚಿವ ಶಿವರಾಜ್ ತಂಗಡಗಿ ಎಲ್ಲರೂ ಸಿಪಿವೈ ಅನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.