ಬೆಳಗಾವಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಹಾಗೂ ಕಾರ್ಯದರ್ಶಿ ಸಂತೋಷ್ ಮೆನನ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಳಗಾವಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಮತ್ತು ಡಿಸಿಎಂ ಅವರು ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಶುಭ ಕೋರಿದರು,.
ಕಳೆದ ಭಾನುವಾರ ನಡೆದ ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರು ದಿ ಪ್ರಿಂಟರ್ಸ್ ಮೈಸೂರು ಲಿ. ನಿರ್ದೇಶಕ ಕೆ.ಎನ್. ಶಾಂತಕುಮಾರ್ ಅವರನ್ನು ಪರಾಭವಗೊಳಿಸಿ ಆಯ್ಕೆಯಾದರು.

