ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಆರೋಪಿಯನ್ನು ಕೊನೆಗೂ ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಬಂಧಿತ ಆರೋಪಿ. ಈತ ಗಿರಿನಗರದ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಇರುವ ಶಿವಕುಮಾರಸ್ವಾಮೀಜಿ ಅವರ ಪುತ್ಥಳಿಯನ್ನು ಕಳೆದ ನ.30 ರಂದು ಸುತ್ತಿಗೆಯಿಂದ ಹೊಡೆದು ಹಾನಿ ಮಾಡಿದ್ದ.
ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರು. ಆದ್ದರಿಂದ ಸ್ವಾಮೀಜಿಗಳ ಮೂರ್ತಿಯನ್ನು ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. 7 ವರ್ಷಗಳ ಹಿಂದೆ ರಾಜ್ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಈತ ಕ್ರಿಶ್ಚಿಯನ್‌ಗೆ ಮತಾಂತರವಾದ ಮೇಲೆ ಧರ್ಮಾಂಧನಂತೆ ವರ್ತಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ನ.30 ರಂದು ರಾತ್ರಿ ಸುತ್ತಿಗೆ ಸಹಿತ ಆರೋಪಿ ಬಂದು, ರಾತ್ರಿ ಯಾರೂ ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಪರಾರಿಯಾಗಿದ್ದ. ಆರೋಪಿಯು ಕ್ರೈಸ್ತ ಧರ್ಮದ ಪ್ರಚಾರ ಮಾಡಲು ಭಿತ್ತಿಪತ್ರ ಹಂಚುತ್ತಿದ್ದ. ಪತ್ರದಲ್ಲಿನ ಕೋಡ್ ಸ್ಕ್ಯಾನ್ ಮಾಡಿದ್ರೆ ಬೈಬಲ್ ಲಭ್ಯವಾಗುತ್ತದೆ ಎಂದು ಪ್ರಚಾರ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.