‘ಅಕ್ವಾನ್’ ಚಂಡಮಾರುತ ತೀವ್ರ ಸ್ವರೂಪಕ್ಕೆ: ಆಂಧ್ರ–ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ

ಚಂಡಮಾರುತ ಭೂಭಾಗ ಪ್ರವೇಶಿಸುವ ಮುನ್ಸೂಚನೆ; ಗಂಟೆಗೆ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅಕ್ವಾನ್’ ಚಂಡಮಾರುತ ತೀವ್ರ ಚಂಡಮಾರುತವಾಗಿ ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಬುಧವಾರ ಬೆಳಗ್ಗೆ ದಕ್ಷಿಣ ಬಂಗಾಳಕೊಲ್ಲಿಯ ಮಧ್ಯಭಾಗ ಹಾಗೂ ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯ ಪಕ್ಕದ ಪ್ರದೇಶಗಳಲ್ಲಿ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದು ಪ್ರಸ್ತುತ ಉತ್ತರ–ವಾಯವ್ಯ ದಿಕ್ಕಿನಲ್ಲಿ ಚಲಿಸುತ್ತಿದ್ದು, ನವೆಂಬರ್ 20ರ ಮಧ್ಯಾಹ್ನದ ವೇಳೆಗೆ ಆಂಧ್ರಪ್ರದೇಶದ ಉತ್ತರ ಕರಾವಳಿ, ಯಾನಂ ಹಾಗೂ ದಕ್ಷಿಣ ಒಡಿಶಾ ಕರಾವಳಿಯ ನಡುವೆ ನರಸಾಪುರದಿಂದ ಪುರಿವರೆಗಿನ ಪ್ರದೇಶದಲ್ಲಿ ಭೂಭಾಗ ಪ್ರವೇಶಿಸುವ ಸಾಧ್ಯತೆಯಿದೆ.

ಈ ವೇಳೆ ಗಂಟೆಗೆ 90ರಿಂದ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಗಾಳಿಯ ವೇಗ 110 ಕಿ.ಮೀ.ವರೆಗೂ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತವು ಆಂಧ್ರಪ್ರದೇಶದ ನರಸಾಪುರದಿಂದ ಸುಮಾರು 500 ಕಿ.ಮೀ., ಕಾಳಿಂಗಪಟ್ಟಣಂನಿಂದ 540 ಕಿ.ಮೀ., ಚೆನ್ನೈನಿಂದ 560 ಕಿ.ಮೀ., ಒಡಿಶಾದ ಗೋಪಾಲಪುರದಿಂದ 630 ಕಿ.ಮೀ. ಹಾಗೂ ಪುರಿಯಿಂದ 690 ಕಿ.ಮೀ. ದೂರದಲ್ಲಿದೆ ಎಂದು ಬುಧವಾರ ಸಂಜೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಒಡಿಶಾದಲ್ಲಿ ಮುನ್ನೆಚ್ಚರಿಕೆ ಕ್ರಮ

ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾದ ರಾಯಗಡ ಜಿಲ್ಲಾಡಳಿತವು ಭೂಕುಸಿತ ಸಂಭವಿಸುವ ಸಾಧ್ಯತೆಯಿರುವ ಸುಮಾರು 55 ಗ್ರಾಮಗಳನ್ನು ಗುರುತಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಹಾಗೂ ಅಗತ್ಯ ಸಿದ್ಧತೆಗಳನ್ನು ತೀವ್ರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅಶುತೋಷ್ ಕುಲಕರ್ಣಿ ತಿಳಿಸಿದ್ದಾರೆ.

ಇನ್ನೊಂದೆಡೆ, ಮಲ್ಕಾನ್‌ಗಿರಿ ಜಿಲ್ಲೆಯಲ್ಲಿ ನವೆಂಬರ್ 19 ಮತ್ತು 20ರಂದು ಎಲ್ಲಾ ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಆಂಧ್ರ ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಚಂಡಮಾರುತದ ಪರಿಣಾಮ ಕರಾವಳಿ ಆಂಧ್ರಪ್ರದೇಶದ ಕೆಲವೆಡೆ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಕೆ. ನಾಗರತ್ನ ತಿಳಿಸಿದ್ದಾರೆ.

ಕರಾವಳಿ ಆಂಧ್ರಪ್ರದೇಶದ ಕೆಲವು ಪ್ರದೇಶಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರಿ ಮಳೆಯಾಗಬಹುದು. ಹಲವು ಪ್ರದೇಶಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ, ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಸಲಹೆಗಳನ್ನು ಆಧರಿಸಿ ಸಮುದ್ರದ ಒಳಭಾಗ ಮತ್ತು ಕರಾವಳಿಯಲ್ಲಿನ ಚಟುವಟಿಕೆಗಳನ್ನು ಪರಿಶೀಲಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

More articles

Latest article

Most read