ಕರಾವಳಿ ಜನರೇ ಎಚ್ಚರ, ಕೇರಳ ಚಂಡಮಾರುತದಿಂದ ಭಾರೀ ಮಳೆಯಾಗಲಿದೆ

ಬೆಂಗಳೂರು: ದಕ್ಷಿಣ ಕೇರಳದಲ್ಲಿ ಸಾಂದ್ರಗೊಳ್ಳುತ್ತಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ (11-5-2024) ಮೇ.14ರವರೆಗೆ ಭಾರೀ ಮಳೆಯಾಗುವ ಸಂಭವವಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತದ ಪರಿಣಾಮವಾಗಿ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು, ಕರಾವಳಿಯುದ್ದಕ್ಕೂ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಂಭವವಿದೆ.

ಮಂಗಳೂರು, ಉಡುಪಿ, ಕಾರವಾರ ಸೇರಿದಂತೆ ಕರಾವಳಿ ಭಾಗದಲ್ಲಿ ಇದುವರೆಗೆ ಮುಂಗಾರು ಪೂರ್ವ ಮಳೆಯಾಗಿಲ್ಲವಾದ್ದರೂ ಚಂಡಮಾರುತದ ಪರಿಣಾಮವಾಗಿ ಮೇ. 14ರವರೆಗೆ ಭಾರೀ ಮಳೆಯಾಗುವ ಸಂಭವವಿದೆ.

ನಗರಪ್ರದೇಶದಲ್ಲಿ ಭಾರೀ ಮಳೆಯಿಂದ ರಸ್ತೆಗಳು ಜಲಾವ್ರತಗೊಳ್ಳುವ ಸಂಭವವಿದ್ದು ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.

ಕಚ್ಚಾ ರಸ್ತೆ, ಕಚ್ಚಾ ಮನೆಗಳು ಮತ್ತು ಗುಡಿಸಲುಗಳು ಭಾರೀ ಮಳೆಯಿಂದಾಗಿ ಹಾನಿಗೀಡಾಗುವ ಸಂಭವವಿದೆ. ಕೆಲಭಾಗದಲ್ಲಿ ಗುಡ್ಡ ಕುಸಿದ, ಭೂಕುಸಿತ ಕೂಡ ಸಂಭವಿಸುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗುವ ಸಂಭವವಿದೆ ಎಂದು ಎಚ್ಚರಿಸಲಾಗಿದೆ.

More articles

Latest article

Most read