ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ಚುನಾವಣೆ; ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಜಯ

Most read

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಜಯ ಗಳಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ರಾಜು ಪೂಜಾರಿ ಅವರನ್ನು 1967 ಮತಗಳ ಅಂತರದಿಂದ ಸೋಲಿಸಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದಾರೆ.


ಕಿಶೋರ್ ಅವರು ಪುತ್ತೂರು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದಲ್ಲಿ ಪದವಿ ವ್ಯಾಸಂಗವನ್ನು ಮುಗಿಸಿ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ ವಿಭಾಗದಲ್ಲಿ ಎಂ.ಎ. ಪದವಿಯನ್ನು ಪಡೆದಿದ್ದಾರೆ.
ಕಳೆದ ಮೂರು ದಶಕಗಳಿಂದ ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ದಕ್ಷಿಣ ಕನ್ನಡ ಭಾರತೀಯ ಜನತಾ ಪಕ್ಷದ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ರಾಜ್ಯ ಯುವ ಮೋರ್ಚಾದ ಉಪಾಧ್ಯಕ್ಷರಾಗಿದ್ದರು. ಮೆಸ್ಕಾಂ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.


ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕಾಗಿ ಅಕ್ಟೋಬರ್ 21ರಂದು ಚುನಾವಣೆ ನಡೆದಿತ್ತು.

More articles

Latest article