Thursday, December 12, 2024

ಡಾಲಿ ಮದುವೆ ಫಿಕ್ಸ್: ಬಾಳ ಸಂಗಾತಿಯನ್ನು ಪರಿಚಯಿಸಿದ ನಟ ಧನಂಜಯ

Most read

ಸ್ಯಾಂಡಲ್‌ವುಡ್‌ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದಾರೆ.ಹೋದಲ್ಲಿ ಬಂದಲ್ಲಿ ಮದುವೆ ಯಾವಾಗ ಎನ್ನುವ ಪ್ರಶ್ನೆ ಡಾಲಿಗೆ ಇಂದು ತೆರೆ ಎಳೆದಿದ್ದಾರೆ.

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂಜಯ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ. ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು. ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು ನಾನು ಧನ್ಯ ಎಂದು ಧನಂಜಯ ಟ್ವೀಟ್ ಮಾಡಿದ್ದಾರೆ. ಜೊತೆಗೆ ನಾಡ ಕವಿ ಬೇಂದ್ರೆ ಅವರ ಕವನವನ್ನು ಹೇಳುವ ಮೂಲಕ ತನ್ನ ಸಂಗಾತಿಯನ್ನು ಪರಿಚಯಿಸಿದ್ದಾರೆ‌.

ಡಾಲಿ ಮತ್ತು ಧನ್ಯತಾ ಅವರ ಇಬ್ಬರ ಕುಟುಂಬಸ್ಥರು ಒಪ್ಪಿ ಈ ಮದುವೆ ಮಾಡುತ್ತಿದ್ದಾರೆ. 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ಈ ಮದುವೆ ನಡೆಯಲಿದೆ.

More articles

Latest article