ಬೆಂಗಳೂರು: ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ವಿದೇಶದಲ್ಲಿ PhD ಸಂಶೋಧನೆ ನಡೆಸಲು ರಾಜ್ಯ ಸರ್ಕಾರ ಸಹಾಯಧನ ನೀಡುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯು ಹೊಸ ಆದೇಶ ಹೊರಡಿಸಿದೆ.
ಈ ಹಿಂದೆ 2023ರಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆದೇಶವೊಂದನ್ನು ಹೊರಡಿಸಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ ಕೈಗೊಳ್ಳಲು ಸರ್ಕಾರದ ಬಳಿ ಸಹಾಯಧನ ಲಭ್ಯ ಇಲ್ಲವೆಂದೂ ಕೇವಲ ಸ್ನಾತಕೋತ್ತರ ಅಧ್ಯಯನಕ್ಕೆ ಮಾತ್ರ ಸಹಾಯಧನ ಲಭ್ಯ ಇರುತ್ತದೆ ಎಂದು ತಿಳಿಸಲಾಗಿತ್ತು.
ಸಮಾಜ ಕಲ್ಯಾಣ ಅಧಿಕಾರಿ ಮಣಿವಣ್ಣನ್ ಅವರು ದಲಿತ ಅಭ್ಯರ್ಥಿಗಳಿಗೆ PhD ಸಂಶೋಧನೆಗೆ ನೀಡುವ ಹಣವು Waste of money ಎಂದು ಹೇಳಿದ್ದು ವರದಿಯಾಗಿತ್ತು.
ಒಂದು ತಿಂಗಳ ಹಿಂದೆ ಪ್ರಬುದ್ಧ ಯೋಜನೆಯ ರದ್ದತಿ ಕುರಿತು ತೀವ್ರ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಒತ್ತಡಕ್ಕೆ ಒಳಗಾಗಿರುವ ಸಮಾಜ ಕಲ್ಯಾಣ ಇಲಾಖೆ ಇದೀಗ ಹೊಸ ಆದೇಶ ಹೊರಡಿಸಿದೆ. ಹಿಂದಿನ ಆದೇಶವನ್ನು ರದ್ದುಗೊಳಿಸಿದೆ.
ಈಗ ಹೊರಡಿಸಿರುವ ಆದೇಶದಂತೆ ವಿಶ್ವದ ಅಗ್ರ 250ರೊಳಗಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ ನಡೆಸಲು unconditional offer letter ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಪ್ರಬುದ್ಧ ಯೋಜನೆಯಡಿ ಆಯ್ಕೆ ಮಾಡಲಾಗುತ್ತದೆ.
ವಿದೇಶಿ ವಿಶ್ವವಿದ್ಯಾಲಯದಲ್ಲಿ PhD ಕೈಕೊಂಡ ನಂತರದಲ್ಲಿ ಕನಿಷ್ಠ 2 ವರ್ಷಗಳ ಕಾಲ ಸ್ವದೇಶದಲ್ಲಿ ಸೇವೆ ಸಲ್ಲಿಸುವ ಷರತ್ತು ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.