Saturday, July 27, 2024

ಕುತೂಹಲ ಮೂಡಿಸಿದ ದಲಿತ ಸಚಿವರ ಸಭೆ!

Most read

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗೃಹ ದಲಿತ ಸಚಿವತರೆಲ್ಲರೂ ಸೇರಿ ಗುರುವಾರ ರಾತ್ರಿ ಭೋಜನ ಸವಿಯುವ ನೆಪದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಸಚಿವ ಸತೀಶ್ ಜಾರಕಿಹೊಳಿ ಗುರುವಾರ ಡಿನ್ನರ್ ನೆಪದಲ್ಲಿ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಸಚಿವರಾದ ಡಾ.ಜಿ. ಪರಮೇಶ್ವರ್, ಡಾ.ಹೆಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಕೆ.ಎನ್. ರಾಜಣ್ಣ ಸಭೆಯಲ್ಲಿ ಭಾಗವಹಿಸಿದ್ದಾರೆ. 

ಸಭೆಯಲ್ಲಿ ಹಾಜರಿದ್ದವರ ಪೈಕಿ ಸತೀಶ್ ಜಾರಕಿಹೊಳಿ, ಗೃಹ ಸಚಿವ ಪರಮೇಶ್ವರ್ ಕೂಡ ಡಿಸಿಎಂ ಸ್ಥಾನದ ರೇಸ್‌ನಲ್ಲಿ ಪ್ರಮುಖವಾಗಿ ಇದ್ದಾರೆ ಎಂಬುದು ಗಮನಾರ್ಹ. ಇವರೆಲ್ಲ ಸತೀಶ್ ಜಾರಕಿಹೊಳಿ, ಮಹದೇವಪ್ಪ, ಕೆ.ಎನ್.ರಾಜಣ್ಣ ಇವರೆಲ್ಲಾ ಸಿಎಂ ಸಿದ್ದರಾಮಯ್ಯ ಬಣಕ್ಕೆ ಸೇರಿದವರು ಎಂಬುದೂ ವಿಶೇಷ.

ಸಭೆ ಬಳಿಕ ಮಾತನಾಡಿದ ಹೆಚ್‌.ಸಿ. ಮಹದೇವಪ್ಪ, ಸಚಿವ ಸತೀಶ್ ಜಾರಕಿಹೊಳಿ ಊಟಕ್ಕೆ ಕರೆದಿದ್ದರು ಬಂದಿದ್ದೆವು ಎಂದಷ್ಟೇ ಹೇಳಿದ್ದಾರೆ. ಕೆ.ಎಚ್. ಮುನಿಯಪ್ಪ ಮಾತನಾಡಿ, ನಾನು ಊಟಕ್ಕೆ ಬಂದಿದ್ದೆ, ಉಳಿದವರು ಯಾವ ಕಾರಣಕ್ಕೆ ಬಂದಿದ್ದರೋ ಗೊತ್ತಿಲ್ಲ ಎಂದಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ 3 ಡಿಸಿಎಂ ಹುದ್ದೆ ಸೃಷ್ಟಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಎಲ್ಲ ಬೆಳವಣಿಗೆ ಮಧ್ಯೆ ಮತ್ತೆ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ದಲಿತ ನಾಯಕರ ಸಭೆ ನಡೆದಿದೆ.

More articles

Latest article