ಉತ್ತರಪ್ರದೇಶದ ಸಹರಾನ್‌ಪುರ ಜಿಲ್ಲೆಯ ದಿಯೋಬಂದ್ ಪ್ರದೇಶದ ಹಳ್ಳಿಯೊಂದರಲ್ಲಿ 24 ವರ್ಷದ ದಲಿತ ಯುವಕ ಸೋಮವಾರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಯೋಬಂದ್ ಪ್ರದೇಶದ ಮಾಯಾಪುರ ಗ್ರಾಮದಲ್ಲಿ ರಾಜನ್ (24) ಎಂಬ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಗ್ರಾಮಾಂತರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಜೈನ್ ತಿಳಿಸಿದ್ದಾರೆ.
ತಂದೆ ಯಶಪಾಲ್ ತನ್ನ ಮಗನನ್ನು ಕೊಂದು ನಂತರ ಮರಕ್ಕೆ ನೇಣು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಫೋರೆನ್ಸಿಕ್ ಮತ್ತು ಇತರ ತಂಡಗಳು ಕೆಲಸ ಮಾಡುತ್ತಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.