ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತರು ಅಸುರಕ್ಷಿತವಾಗಿಲ್ಲ ಎನ್ನುವುದಕ್ಕೆ ಹರಿಯಾಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಅವರ ಆತ್ಮಹತ್ಯೆ ಉತ್ತಮ ನಿದರ್ಶನವಾಗಿದೆ ಎಂದು ಕಾಂಗ್ರೆಸ್ ನಾಯಕಿ ಸಂಸದೆ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಣದಲ್ಲಿ ಬಿಜೆಪಿ ವಿರುದ್ಧ ಅವರು ಕಿಡಿಕಾರಿದ್ದಾರೆ.
ಬಿಜೆಪಿ ಆಡಳಿತದಲ್ಲಿ ದಲಿತರಿಗೆ ನ್ಯಾಯ ಎನ್ನುವುದು ಮರೀಚಿಕೆಯಾಗಿದೆ. ದಲಿತರು ಉನ್ನತ ಹುದ್ದೆಗಳಿಗೆ ಏರಿದರೂ ಕಿರುಕುಳ ತಪ್ಪಿದ್ದಲ್ಲ ಎನ್ನುವುದಕ್ಕೆ ಈ ಆತ್ಮಹತ್ಯೆ ಪ್ರಕರಣ ಸಾಕ್ಷಿಯಾಗಿದೆ. ಇಂತಹ ಅಮಾನವೀಯ ಘಟನೆಗಳು ದೇಶ ಮತ್ತು ಸಮಾಜಕ್ಕೆ ಕಪ್ಪು ಚುಕ್ಕೆಯಾಗಿವೆ ಎಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್ ಮತ್ತು ರೋಹಕ್ ಎಸ್‌ಪಿ ನರೇಂದ್ರ ಬಿಜರ್ನಿಯಾ ಸೇರಿದಂತೆ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಪೂರಣ್ ಕುಮಾರ್ ಜಾತಿ ತಾರತಮ್ಮ, ಮಾನಸಿಕ ಕಿರುಕುಳದ ಆರೋಪ ಮಾಡಿದ್ದಾರೆ. ಡೆತ್ ನೋಟ್ ನಲ್ಲಿಯೂ ಇದನ್ನೇ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.